Site icon PowerTV

ಜೆಡಿಎಸ್​ನ ಯಾವುದೇ ಶಾಸಕರು ಪಕ್ಷ ಬಿಟ್ಟು ಹೋಗಲ್ಲ: ಹೆಚ್. ಡಿ. ಕುಮಾರಸ್ವಾಮಿ

ಬೆಂಗಳೂರು: ನಮ್ಮ ಜೆಡಿಎಸ್​ ಪಕ್ಷದಿಂದ ಯಾವುದೇ ಶಾಸಕರು ಪಕ್ಷವನ್ನು ತೊರೆದು ಹೋಗಲ್ಲ ಎಂದು ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಿನ್ನೆ ಸಭೆಯಲ್ಲಿ 19 ಶಾಸಕರ ಪೈಕಿ 18 ಶಾಸಕರು ಭಾಗಿಯಾಗಿದ್ದರು. ಕೆಲವೊಬ್ಬರು ನಮ್ಮ ಪಕ್ಷದಲ್ಲಿ ಶಾಸಕರು ಪಕ್ಷ ಬಿಟ್ಟು ಹೋಗ್ತಾರೆಂದು ಗೊಂದಲ ಸೃಷ್ಟಿ ಮಾಡ್ತಿದ್ದಾರೆ ಆದ್ರೆ ನಮ್ಮ ಪಕ್ಷದಿಂದ ಯಾರು ಪಕ್ಷ ತೊರೆಯುವುದಿಲ್ಲ ಎಂದರು. 

ಸಭೆಯಲ್ಲಿ ಶಾಸಕ ಶರಣಗೌಡ ಕಂದಕೂರ್​ ಭಾಗಿಯಾಗಿರಲಿಲ್ಲ ಅವರು​ ನಮ್ಮ ಮನೆಯ ಮಗ, ಅವರಲ್ಲಿ ಸ್ವಲ್ಪ ಗೊಂದಲ ಇದೆ. ಅವರನ್ನು ಕರೆದು ಮಾತನಾಡ್ತೇನೆ. ಶಾಸಕರು ಪಕ್ಷ ಬಿಟ್ಟು ಹೋಗ್ತಾರೆಂದು ಗೊಂದಲ ಸೃಷ್ಟಿ ಮಾಡ್ತಿದ್ದಾರೆ.

ಇದನ್ನೂ ಓದಿ: ಆರೋಪಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ : ಸಚಿವ ಪ್ರಿಯಾಂಕ್ ಖರ್ಗೆ

ನಮ್ಮ ಶಾಸಕರ ಮೇಲೆ ಯಾವುದೇ ಅನುಮಾನ ಇಲ್ಲ. ಕಾಂಗ್ರೆಸ್​ ಆಮಿಷಕ್ಕೆ ಒಳಗಾಗಿ ಯಾವ ಶಾಸಕರು ಪಕ್ಷ ಬಿಡುವುದಿಲ್ಲ ಎಂದರು.

 

 

 

Exit mobile version