Friday, August 29, 2025
HomeUncategorizedಮಾಜಿ ಸಚಿವ ಸುಧಾಕರ್ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆಪ್​ ಪಕ್ಷ ದೂರು!

ಮಾಜಿ ಸಚಿವ ಸುಧಾಕರ್ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆಪ್​ ಪಕ್ಷ ದೂರು!

ಬೆಂಗಳೂರು : ಕೋವಿಡ್​ ಸಂದರ್ಭದಲ್ಲಿ ಅಕ್ರಮವೆಸಗಿ ನೂರಾರು ಕೋಟಿ ವಂಚನೆ ನಡೆಸಿರುವ ಅಂದಿನ ಆರೋಗ್ಯ ಸಚಿವ ಡಾ.ಸುಧಾಕರ್​ ವಿರುದ್ದ ದೂರು ದಾಖಲಿಸುವಂತೆ ಕೋರಿ ICMR ಗೆ ದೂರು ನೀಡಿದ್ದಾರೆ.

ಆಮ್ ಆದ್ಮಿ ಪಕ್ಷವು ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆಯ 140 ಕೋಟಿ ಬೃಹತ್ ಹಗರಣವನ್ನು ಬಯಲು ಗೆಳೆದಿತ್ತು ಈ ಸಂಬಂಧ 330 ಪುಟಗಳ ದಾಖಲೆಯನ್ನು ಸಹ ಬಹಿರಂಗಗೊಳಿಸಿತ್ತು. ಅಕ್ರಮ ಕೋವಿಡ್ ಟೆಸ್ಟ್ ಗಳನ್ನು ಮಾಡಿ ನೂರಾರು ಕೋಟಿ ಅಕ್ರಮ ಅವ್ಯವಹಾರಗಳನ್ನು ನಡೆಸಿದ ಹಗರಣವನ್ನು ಬಯಲು ಮಾಡಲಾಗಿತ್ತು.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ. ಟಿ. ನಾಗಣ್ಣ “ಪಕ್ಷದ ಕಾನೂನು ಘಟಕವು ಈ ಬೃಹತ್ ಹಗರಣದ ರೂವಾರಿ ಹಾಗೂ ಪ್ರಮುಖ ಆರೋಪಿ ಅಂದಿನ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ. ಸುಧಾಕರ್, ಕಿದ್ವಾಯಿ ಗ್ರಂಥೀ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿ. ರಾಮಚಂದ್ರ ಹಾಗೂ ಬಿಎಂಎಸ್ ಸಂಸ್ಥೆಯ ಮಾಲೀಕ ಎಸ್ ಪಿ ರಕ್ಷಿತ್ ರವರ ಮೇಲೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಗೆ (ಐಸಿಎಂಆರ್) ದೂರನ್ನು ನೀಡಲಾಗಿದೆ.

ಇದನ್ನೂ ಓದಿ: ವಂಚನೆ ಕೇಸ್​; ಅಭಿನವ ಹಾಲಶ್ರೀಗೆ ಜಾಮೀನು!

ಈ ಕೂಡಲೇ ಕಿದ್ವಾಯಿ ಸ್ಮಾರಕ ಗ್ರಂಥಿ ಕ್ಯಾನ್ಸರ್ ಆಸ್ಪತ್ರೆ ಹಾಗೂ ಆರೋಪಿತ ಬಿಎಂಎಸ್ ಸಂಸ್ಥೆಯ ನಡುವಿನ ಒಪ್ಪಂದ ಪತ್ರ (MOU) ರದ್ದುಗೊಳಿಸಬೇಕು. ಹಗರಣದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಪ್ರಭಾವಿಗಳ ವಿರುದ್ಧ ಕ್ರಿಮಿನಲ್ ಮುಖದ್ದಮೆಯನ್ನು ದಾಖಲಿಸಲು ಕ್ರಮ ತೆಗೆದುಕೊಳ್ಳಬೇಕು ಮತ್ತು ತಪಿತಸ್ತರ ಆಸ್ತಿ ಮುಟ್ಟುಗೋಲನ್ನು ಹಾಕಿಕೊಳ್ಳುವ ಮೂಲಕ ಅಕ್ರಮ ನೂರಾರು ಕೋಟಿ ರೂಪಾಯಿಗಳನ್ನು ವಸೂಲು ಮಾಡಬೇಕೆಂದು ದೂರನ್ನು ನೀಡಲಾಗಿದೆ ” ಎಂದು ಬಿಟಿ ನಾಗಣ್ಣ ತಿಳಿಸಿದರು.

ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಹಾಗೂ ಪಕ್ಷದ ಕಾನೂನು ಘಟಕದ ವಕೀಲರಾದ ಲೋಹಿತ್ ಜಿ. ಹನುಮಪುರ ಮಾತನಾಡಿ , ರಾಜ್ಯದಲ್ಲಿನ ಎಲ್ಲಾ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಇಲಾಖೆಗಳ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ರೋಗ ತಪಾಸಣೆ ವಿಭಾಗವನ್ನು ಖಾಸಗಿ ಲ್ಯಾಬೋರೇಟರಿಗಳಿಗೆ ನೀಡಿ ಸಾವಿರಾರು ಕೋಟಿ ತೆರಿಗೆದಾರರ ಹಣವನ್ನು ಲೂಟಿ ಮಾಡುತ್ತಿರುವ ವ್ಯವಸ್ಥೆಯನ್ನು ಸಮಗ್ರವಾಗಿ ದಾಖಲೆಗಳ ಸಮೇತ ಮುಂಬರುವ ದಿವಸಗಳಲ್ಲಿ ಬಹಿರಂಗಗೊಳಿಸಲಾಗುವುದು , ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಇಂತಹ ಖಾಸಗಿ ಲ್ಯಾಬೋರೇಟರಿಗಳ ಹಗಲು ದರೋಡೆ ನಿಲ್ಲಿಸಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments