Site icon PowerTV

ದೀಪಾವಳಿ ಎಫೆಕ್ಟ್ : ಖಾಸಗಿ ಬಸ್​ಗಳ ಟಿಕೆಟ್ ದರ ವಿಪರೀತ ದುಬಾರಿ

ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಖಾಸಗಿ ಬಸ್​ನವರು ಟಿಕೆಟ್‌ ದರ ವಿಪರೀತ ಹೆಚ್ಚಿಸಿದ್ದು, ಪ್ರಯಾಣಿಕರಿಗೆ ಸಂಕಷ್ಟ ತಂದೊಡ್ಡಿದೆ.

ಈ ಸಮಯದಲ್ಲಿ ಸಾವಿರಾರು ಜನ ತಮ್ಮ ಊರುಗಳಿಗೆ ಪ್ರಯಾಣಿಸುವುದರಿಂದ, ಖಾಸಗಿ ಟ್ರಾವೆಲ್ ಆಪರೇಟರ್‌ಗಳು ಟಿಕೆಟ್‌ಗಳ ಬೆಲೆಯನ್ನು ಶೇಕಡ 30ರಷ್ಟು ಹೆಚ್ಚಿಸಿದ್ದಾರೆ. ಹೆಚ್ಚಿನ ಬೇಡಿಕೆಯಿರುವ ಮಾರ್ಗಗಳಲ್ಲಿ ಇದು ಇನ್ನೂ ಹೆಚ್ಚಾಗಿದೆ.

ಈ ಮಧ್ಯೆ, ಹೆಚ್ಚುವರಿ ಶುಲ್ಕ ವಸೂಲಿ ಮಾಡದಂತೆ ಈಗಾಗಲೇ ಖಾಸಗಿ ಬಸ್ ನಿರ್ವಾಹಕರಿಗೆ ಎಚ್ಚರಿಕೆ ನೀಡಲಾಗಿದ್ದು, ಆ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸುವುದಾಗಿ ಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನಿಂದ ತಮಿಳುನಾಡಿನ ನಾಮಕ್ಕಲ್‌ಗೆ ಹವಾನಿಯಂತ್ರಿತವಲ್ಲದ ಸ್ಲೀಪರ್ ಬಸ್ ಸಾಮಾನ್ಯವಾಗಿ ಸುಮಾರು 1,000 ರೂ. ಇರುತ್ತದೆ. ನಾನು ಸಾಮಾನ್ಯವಾಗಿ ಟಿಕೆಟ್ ಬುಕಿಂಗ್ ಅಪ್ಲಿಕೇಶನ್‌ಗಳನ್ನು ಅವಲಂಬಿಸಿರುತ್ತದೆ. ಉತ್ತಮ ಆಫರ್​ಗಳು ಮತ್ತು ಕಡಿಮೆ ಬೆಲೆಗಾಗಿ ಪರಿಶೀಲಿಸುತ್ತೇನೆ ಎಂದು ಹೇಳಿದ್ದಾರೆ.

ಟಿಕೆಟ್ ದರ 2,000 ರೂ. ದಾಟಿದೆ

ದೀಪಾವಳಿ ಬರುತ್ತಿದ್ದಂತೆ ಟಿಕೆಟ್ ದರ 2,000 ರೂಪಾಯಿ ದಾಟಿದೆ. ಹಬ್ಬ ಹರಿದಿನಗಳಲ್ಲಿ ಖಾಸಗಿ ಟ್ರಾವೆಲ್‌ ಆಪರೇಟರ್‌ಗಳು ಬೇಡಿಕೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಸರಕಾರ ಅಂಥವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಅಳಲು ತೋಡಿಕೊಂಡಿದ್ದಾರೆ.

Exit mobile version