Site icon PowerTV

MP, MLA ವಿರುದ್ಧದ ಪ್ರಕರಣ ಇತ್ಯರ್ಥಕ್ಕೆ ಸುಪ್ರಿಂ ಕೋರ್ಟ್​ ಮಾರ್ಗಸೂಚಿ!

ದೆಹಲಿ: ಶಾಸಕರು ಹಾಗೂ ಸಂಸದರ ವಿರುದ್ಧದ ಪ್ರಕರಣಗಳನ್ನು ಆದ್ಯತೆ ಮೇರೆಗೆ ಇತ್ಯರ್ಥಪಡಿಸಲು ಸುಪ್ರೀಂಕೋರ್ಟ್​ ಮಾರ್ಗಸೂಚಿ ಹೊರಡಿಸಿದೆ.

ಸಂಸದರು ಹಾಗೂ ವಿಧಾನಸಭೆಗಳ ಸದಸ್ಯರ ವಿರುದ್ಧ ಬಾಕಿ ಉಳಿದಿರುವ ಕ್ರಿಮಿನಲ್ ಮೊಕದ್ದಮೆಗಳ ಶೀಘ್ರ ಇತ್ಯರ್ಥವನ್ನು ಮೇಲ್ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್ ನಿರ್ದೇಶನವನ್ನು ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಈ ನಿರ್ದೇಶನ ನೀಡಿದೆ.

ಇದನ್ನೂ ಓದಿ: ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ: ಸಿಎಂ

ಎಲ್ಲಾ ರಾಜ್ಯಗಳಿಗೂ ಅನ್ವಯವಾಗುವ ಏಕರೂಪದ ಮಾರ್ಗಸೂಚಿಗಳನ್ನು ರೂಪಿಸಲು ಸುಪ್ರೀಂಕೋರ್ಟ್​ಗೆ ಕಷ್ಟಕರವಾಗಿದೆ. ಸಂಸದರು, ಶಾಸಕರ ವಿರುದ್ಧದ ಬಾಕಿ ಉಳಿದಿರುವ ಕ್ರಿಮಿನಲ್ ಮೊಕದ್ದಮೆಯನ್ನು ತ್ವರಿತವಾಗಿ ವಿಲೇವಾರಿ ಮಾಡುವುದನ್ನು ಮೇಲ್ವಿಚಾರಣೆ ಮಾಡಲು ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಸ್ವಯಂ ಪ್ರೇರಿತ ಪ್ರಕರಣ ಎಂದು ಗೊತ್ತುಪಡಿಸಿದ ನ್ಯಾಯಾಲಯಗಳಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದೆ.

Exit mobile version