Site icon PowerTV

ಮಂಡ್ಯದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್!

ಮಂಡ್ಯ: 17 ವರ್ಷದ ಅಪ್ರಾಪ್ತೆಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಂಡ್ಯದ ಮದ್ದೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಪ್ರಾಪ್ತೆಯನ್ನು ಸಹಪಾಠಿಗಳೇ ಪುಸಲಾಯಿಸಿ ಕರೆತಂದು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಕಿರಾತಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಕೃತ್ಯದ ವೀಡಿಯೋ ಮಾಡಿದ್ದಾರೆ. ವೀಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ: 3 ಕೋಟಿ ಮೌಲ್ಯದ ಚಿನ್ನ ವಶಕ್ಕೆ!

ಮೂವರು ಆರೋಪಿಗಳು ಕೂಡಾ ಮದ್ದೂರು ತಾಲೂಕಿನವರಾಗಿದ್ದು, ಸಂತ್ರಸ್ತೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಮದ್ದೂರು ಪಟ್ಟಣ ಠಾಣಾ ಪೊಲಿಸರು ಆರೋಪಿಗಳನ್ನು ಬಂಧಿಸಲಾಗಿದೆ.

Exit mobile version