Site icon PowerTV

PSI ನೇಮಕ ಅಕ್ರಮ: ಇಂದು ಹೈಕೋರ್ಟ್ ತೀರ್ಪು

ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರಕಾರ ಹೊರಡಿಸಿದ್ದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ಕುರಿತ ತೀರ್ಪನ್ನು ಹೈಕೋರ್ಟ್ ಇಂದು (ಶುಕ್ರವಾರ) ಪ್ರಕಟಿಸಲಿದೆ.

ಸರಕಾರದ ಆದೇಶ ರದ್ದು ಕೋರಿ ಎನ್.ವಿ. ಚಂದನ್ ಸಹಿತ ಆಯ್ಕೆಪಟ್ಟಿಯಲ್ಲಿ ಹೆಸರಿದ್ದ 100 ಅಧಿಕ ಮಂದಿ ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ಕಾದಿರಿಸಿರುವ ತೀರ್ಪುನ್ನು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಇಂದು  ಮಧ್ಯಾಹ್ನ 1.25ಕ್ಕೆ ನೀಡಲಿದೆ

 

Exit mobile version