Site icon PowerTV

ವಿಜಯೇಂದ್ರಗೆ ಸಹೋದರ ಬಿ.ವೈ ರಾಘವೇಂದ್ರ ಶುಭಾಶಯ

ಬೆಂಗಳೂರು : ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿರುವ ಸಹೋದರ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಅವರಿಗೆ ಸಂಸದ ಬಿ.ವೈ ರಾಘವೇಂದ್ರ ಶುಭಾಶಯ ತಿಳಿಸಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಬಿ.ವೈ ವಿಜಯೇಂದ್ರ ಅವರಿಗೆ ಹಾರ್ದಿಕ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

ಸಹೋದರ ವಿಜಯೇಂದ್ರ ಹಿರಿಯರ ಆಶೀರ್ವಾದ ಹಾಗೂ ಕಿರಿಯರ ಬೆಂಬಲದೊಂದಿಗೆ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಿ ಮುನ್ನಡೆಸುತ್ತಾರೆ. ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪನವರು, ದಿವಂಗತ ಅನಂತಕುಮಾರ್ ಸೇರಿದಂತೆ ಮುಂತಾದ ನಾಯಕರುಗಳ ದಾರಿಯಲ್ಲಿ ನಡೆಯುತ್ತಾರೆ ಅನ್ನುವ ಭರವಸೆ ನನಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹೊಸ ಕಿರಣವಾಗಿ ಹೊರಹೊಮ್ಮಲಿ

ವಿಜಯೇಂದ್ರ ಅವರ ನಾಯಕತ್ವದಲ್ಲಿ ಬಿಜೆಪಿ ಪಕ್ಷ ಹೊಸ ಚೈತನ್ಯದೊಂದಿಗೆ ಬೆಳೆಯಲಿ. ರಾಜ್ಯವನ್ನು ಆವರಿಸಿಕೊಂಡಿರುವ ಕಾಂಗ್ರೆಸ್ ದುರಾಡಳಿತದ ಕಾರ್ಮೋಡದ ನಡುವೆ ಭರವಸೆಯ ಒಂದು ಹೊಸ ಕಿರಣವಾಗಿ ಹೊರಹೊಮ್ಮಲಿ ಅಂತ ಹಾರೈಸುತ್ತೇನೆ ಎಂದು ಸಂಸದ ಬಿ.ವೈ ರಾಘವೇಂದ್ರ ಶುಭ ಹಾರೈಸಿದ್ದಾರೆ.

Exit mobile version