Site icon PowerTV

ಯಡಿಯೂರಪ್ಪನವರ ಪುತ್ರ ಎಂಬುದಕ್ಕೆ ಹೆಮ್ಮೆ ಇದೆ : ಬಿ.ವೈ. ವಿಜಯೇಂದ್ರ ಮೊದಲ ಪ್ರತಿಕ್ರಿಯೆ

ಬೆಂಗಳೂರು : ತಮಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡಿರುವುದಕ್ಕೆ ಶಾಸಕ ಹಾಗೂ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಿಜೆಪಿ ಹೈಕಮಾಂಡ್​ಗೆ ಧನ್ಯವಾದ ಸಲ್ಲಿಸಿದ್ದಾರೆ.

ರಾಜ್ಯಧ್ಯಕ್ಷ ಸ್ಥಾನ ಘೋಷಣೆಯಾದ ಬಳಿಕ ಬೆಂಗಳೂರಿನ ಧವಳಗಿರಿ ನಿವಾಸದಲ್ಲಿ ಮೊದಲ ಪ್ರತಿಕ್ರಿಯೆ ನೀಡಿದ ಅವರು, ಹಿರಿಯರ ಆಶೀರ್ವಾದ ಪಡೆದು ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟಿಸಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ. ಈ ನಿಟ್ಟಿನಲ್ಲಿ ಹೊಸ ಉತ್ಸಾಹದಿಂದ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ವರಿಷ್ಠರ ಆಶೀರ್ವಾದಕ್ಕೆ ನಾನು ಆಭಾರಿ

ಬಿ.ಎಸ್ ಯಡಿಯೂರಪ್ಪನವರ ಪುತ್ರ ಎಂಬುದಕ್ಕೆ ಹೆಮ್ಮೆ ಇದೆ. ಪಕ್ಷದ ವರಿಷ್ಠರು ದೊಡ್ಡ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ. ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಜವಾಬ್ದಾರಿ ವಹಿಸಿದ್ದಾರೆ. ವರಿಷ್ಠರ ಆಶೀರ್ವಾದಕ್ಕೆ ನಾನು ಆಭಾರಿ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

Exit mobile version