Site icon PowerTV

ರಾಜ್ಯಾದ್ಯಂತ ಇನ್ನೂ 2 ದಿನಗಳ ಕಾಲ ಮಳೆ!

ಬೆಂಗಳೂರು: ರಾಜ್ಯಾದ್ಯಂತ ಇನ್ನೂ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಸೇರಿದಂತೆ ಹಲವೆಡೆ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ನ.13ರಿಂದ ಮೆಕ್ಕೆಜೋಳ ಖರೀದಿ ಆರಂಭ: ಸಚಿವ ಕೆ.ವೆಂಕಟೇಶ್​!

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ.

Exit mobile version