Site icon PowerTV

2 ದಿನಗಳ ಕಾಲ ಮಳೆ ಸಾಧ್ಯತೆ!

ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇನ್ನು ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉಡುಪಿ, ಕೋಟ, ಪಣಂಬೂರು, ಉಪ್ಪಿನಂಗಡಿ, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಮತ್ತೊಂದು ದೇವರ ಮೊಸಳೆ ಪ್ರತ್ಯಕ್ಷ!

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ.

Exit mobile version