Site icon PowerTV

ದೀಪಾವಳಿ ಶುಭಾಶಯ ಕೋರಿದ ನಾಡ ದೊರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಳಕಿನ ಹಬ್ಬ ದೀಪಾವಳಿ ತಮ್ಮೆಲ್ಲರ ಬಾಳಿನಲ್ಲಿ ಸುಖ, ಸಮೃದ್ಧಿಯ ಹೊಸ ಬೆಳಕು ಹೊತ್ತು ತರಲಿ ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ.

ಎಲ್ಲರೂ ಪರಿಸರಸ್ನೇಹಿಯಾದ ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ, ಪಟಾಕಿ ಹಚ್ಚುವಾಗ ಕುಟುಂಬದ ಹಿರಿಯರು ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೆ, ಮತ್ತೊಮ್ಮೆ ನಾಡಿನ ಜನತೆಗೆ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

ಡಿಸಿಎಂ ಡಿಕೆಶಿ ಶುಭಾಶಯ

ಇನ್ನೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹ ದೀಪಾವಳಿ ಶುಭಾಶಯ ಕೋರಿದ್ದಾರೆ. ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಮೂಡಲಿ ಖುಷಿಯ ಚಿತ್ತಾರ, ದೂರವಾಗಲಿ ಬದುಕಿನ ಅಂಧಕಾರ, ತುಂಬಲಿ ಮನೆ ಮನಗಳಲ್ಲಿ ಸಡಗರ ಎಂದು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

Exit mobile version