Site icon PowerTV

ರೈಲು ಬೋಗಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಕಲಬುರಗಿ: ಪ್ಲಾಟ್ ಫಾರ್ಮ್‍ನಲ್ಲಿ ನಿಂತಿದ್ದ ರೈಲ್ವೆ ಬೋಗಿಗೆ ವ್ಯಕ್ತಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದ ರೈಲ್ವೆ ಜಂಕ್ಷನ್‍ನಲ್ಲಿ ನಡೆದಿದೆ.

ಸೋಲಾಪುರ ನಗರದ ನಿವಾಸಿ ಮಲ್ಲಿನಾಥ ಸಿದ್ದಪ್ಪ ದೋಶೆಟ್ಟಿ (38) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ಮಲ್ಲಿನಾಥ ವಾಡಿ ರೈಲ್ವೆಯ ಎಸ್‍ಎನ್‍ಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಡೂಪ್ಲಿಕೇಟ್‌ ಸಿಎಂಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ : ಎಚ್‌. ಡಿ . ಕುಮಾರಸ್ವಾಮಿ ಕಿಡಿ

ಘಟನೆಯ ವಿವರ

ಕೆಲ ದಿನಗಳಿಂದ ಕೆಲಸಕ್ಕೆ ಗೈರು ಹಾಜರಾಗಿದ್ದ ಮಲ್ಲಿನಾಥ ಕಾಣೆಯಾಗಿದ್ದಾನೆ ಎಂದು ಪೋಷಕರು ಅ.17 ರಂದು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ರವಿವಾರ ರಾಯಚೂರು ನಗರದಲ್ಲಿ ವಾಡಿ ಪೊಲೀಸರು ಪತ್ತೆ ಹಚ್ಚಿ ವಾಡಿ ಪೊಲೀಸ್ ಠಾಣೆಗೆ ಕರೆತಂದು ಪೋಷಕರಿಗೆ ಒಪ್ಪಿಸಿದ್ದರು. ಇಂದು ಬೆಳಿಗ್ಗೆ ವಾಡಿ ರೈಲ್ವೆ ಪ್ಲಾಟ್ ಫಾರ್ಮ್-1ರಲ್ಲಿ ಕರ್ಮಚಾರಿ ರೈಲು ಬೋಗಿಗೆ ಮಲ್ಲಿನಾಥ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸುದ್ದಿ ತಿಳಿಯುತ್ತಿದ್ದಂತೆಯೇ ರೈಲ್ವೆ ಇಲಾಖೆಯ ಪಿಎಸ್‍ಐ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

 

Exit mobile version