Site icon PowerTV

ಬಿಗ್ ಬಾಸ್ ಸ್ಪರ್ಧಿ ನಟಿ ತನಿಷಾ ವಿರುದ್ಧ FIR ದಾಖಲು

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ನಟಿ ತನಿಷಾ ವಿರುದ್ಧ ಜಾತಿ ನಿಂದನೆ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ.
ತನಿಷಾ ಕುಪ್ಪಂಡ ವಿರುದ್ಧ ಬೆಂಗಳೂರು ಹೊರವಲಯದ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್‌ಸಿ/ಎಸ್‌ಟಿ) ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ನಟಿ ತನಿಷಾ ಕುಪ್ಪಂಡ ವಿರುದ್ಧ ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ ಎಂಬುವರಿಂದ ನವೆಂಬರ್ 11ರಂದು ದೂರು ದಾಖಲಾಗಿದ್ದು, ನವೆಂಬರ್‌ 12 ದೂರಿನ ಆಧಾರದ ಮೇಲೆ‌ ಕುಂಬಳಗೂಡು ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಅವಹೇಳನಕಾರಿ ಪದ ಬಳಕೆ ಬಗ್ಗೆ ತನಿಷಾ ವಿರುದ್ಧ ಆರೋಪ ಎದುರಾಗಿತ್ತು.

ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮ ತನಿಷಾ ಕುಪ್ಪುಂದ ವಿರುದ್ಧ ದೂರು ದಾಖಲಿಸಿದ್ದಾರೆ. ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಮಾಡುವ ಮೂಲಕ ಬೋವಿ ಜನಾಂಗಕ್ಕೆ ನಟಿ ತನಿಷಾ ಕುಪ್ಪಂಡ ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

 

Exit mobile version