Site icon PowerTV

ಜೆಡಿಎಸ್ ರಾಜಕೀಯ ಪಕ್ಷವಲ್ಲ,ಕೌಟುಂಬಿಕ ಪಕ್ಷ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜೆಡಿಎಸ್ ಇಂದು ಜಾತ್ಯಾತೀತ ಪಕ್ಷವಾಗಿ ಉಳಿಯದೆ ಕುಟುಂಬಕ್ಕೆ ಮಾತ್ರ ಸೀಮಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ವಿವಿಧ ಪಕ್ಷದ ನಾಯಕರು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ ಎಸ್ ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ ಎಂದು ವ್ಯಂಗ್ಯವಾಡಿದರು.

ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್​ಗೆ ಸೇರ್ಪಡೆಗೊಂಡರು. ಈ ಇಬ್ಬರು ನಾಯಕರನ್ನು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್​ಗೆ ಬರಮಾಡಿಕೊಂಡು, ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನಸಮುದಾಯದ ರಾಜಕೀಯ ಪಕ್ಷ ಆಗಿ ಉಳಿದಿಲ್ಲ. ಕೇವಲ ಕುಟುಂಬಕ್ಕೆ ಸೀಮಿತವಾಗಿದೆ ಎಂದರು.

ಇದನ್ನೂ ಓದಿ: ನಾಯಿ ಕಚ್ಚಿದ ಪ್ರಕರಣ : ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ ನಟ ದರ್ಶನ್

ಈ ಜೆಡಿಎಸ್‌ನ ಡಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಗೌರಿಶಂಕರ್ ಮತ್ತು ಮಂಜುನಾಥ್ ಸೇರಿದಂತೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ಆ ಮೂಲಕ ತಮ್ಮ ರಾಜಕೀಯ ಜೀವನದ ಮಾರ್ಗವನ್ನೂ ಸರಿ ಮಾಡಿಕೊಂಡಿದ್ದಾರೆ.

ನಾನು ಜೆಡಿಎಸ್ ರಾಜ್ಯಾಧ್ಯಕ್ಷನಾಗಿರುವವರೆಗೆ ಬಿಜೆಪಿ ಜತೆ ಸೇರಲು ಯಾವುದೇ ಅವಕಾಶ ನೀಡಿರಲಿಲ್ಲ. ನನ್ನನ್ನು ಪಕ್ಷದಿಂದ ಉಚ್ಛಾಟಿಸಿ ಬಿಜೆಪಿ ಜತೆ ಮೈತ್ರಿ ಸರ್ಕಾರ ರಚಿಸಿದರು. ಆದರೆ ಯಡಿಯೂರಪ್ಪಗೆ 20 ತಿಂಗಳ ಅಧಿಕಾರ ಬಿಟ್ಟುಕೊಡಲು ನಿರಾಕರಿಸಿದರು. ಇಂದು ಮತ್ತೆ ಜತೆ ಸೇರಿದ್ದಾರೆ. ಅವರಿಗೆ ಜಾತ್ಯಾತೀತರೆಂದು ಹೇಳಿಕೊಳ್ಳಲು ನೈತಿಕತೆ ಇಲ್ಲವೇ ಎಂದು ಹೇಳಿದ್ದರು.

Exit mobile version