Site icon PowerTV

ಗೌರಿಶಂಕರ್ ‘ಕೈ’ ಸೇರ್ಪಡೆ: ಕೆ.ಎನ್​ ರಾಜಣ್ಣ ಅಸಮಾಧಾನ

ಹಾಸನ: ಜೆಡಿಎಸ್‌ನ ಮಾಜಿ ಶಾಸಕ ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆಯಾಗಿರುವುದಕ್ಕೆ ಸಚಿವ ಕೆ.ಎನ್ ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಸನಲ್ಲಿ ಮಾತನಾಡಿದ ಅವರು ‘ನಮ್ಮ ಗಮನಕ್ಕೆ ತರದೆ ಗೌರಿಶಂಕರ್ ಅವರನ್ನು ಸೇರ್ಪಡೆ ಮಾಡಿಕೊಂಡಿದ್ದಕ್ಕೆ ಅಸಮಾಧಾನವಿದೆ. ತುಮಕೂರು ಜಿಲ್ಲೆಯಲ್ಲಿ ಯಾರನ್ನೂ ಸಂಪರ್ಕಿಸದೆ ಸೇರಿಸಿಕೊಂಡಿದ್ದಕ್ಕೆ ಅಸಮಾಧಾನವಿದೆ ಎಂದರು.

ಇದನ್ನೂ ಓದಿ: ಜೆಡಿಎಸ್ ರಾಜಕೀಯ ಪಕ್ಷವಲ್ಲ,ಕೌಟುಂಬಿಕ ಪಕ್ಷ : ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಎನ್ನುವುದು ಸಮುದ್ರವಿದ್ದಂತೆ. ಸಮುದ್ರದಲ್ಲಿ ಗಂಗಾ ಮಾತೆಯಷ್ಟು ಪವಿತ್ರ ಜಲವೂ ಬರುತ್ತೆ, ಪಕ್ಕದ ಚರಂಡಿ ನೀರು ಕೂಡ ಬರುತ್ತೆ. ಸಮುದ್ರದಲ್ಲಿ ಅಮೃತವೂ ಇದೆ, ವಿಷವೂ ಇದೆ. ಅಮೃತ ಸಿಗೋರಿಗೆ ಅಮೃತ ಸಿಗುತ್ತೆ, ವಿಷ ಸಿಗೋರಿಗೆ ವಿಷ ಸಿಗುತ್ತೆ ಎಂದು ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ರಾಜಣ್ಣ ಮಾರ್ಮಿಕವಾಗಿ ಅಸಮಾಧಾನ ಹೊರಹಾಕಿದ್ದಾರೆ.

 

Exit mobile version