Site icon PowerTV

ಕಿಂಗ್ ಕೊಹ್ಲಿ ದಾಖಲೆಯ ಆಟಕ್ಕೆ ಸಚಿನ್ ಭಾವನಾತ್ಮಕ ಪೋಸ್ಟ್

ಬೆಂಗಳೂರು: ವಿರಾಟ್ ಕೊಹ್ಲಿ ದಾಖಲೆಯ ಆಟಕ್ಕೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

ಇಂದು ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾದ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.

ಸಚಿನ್ ತೆಂಡೂಲ್ಕರ್ ಅವರು ಏಕದಿನ ಕ್ರಿಕೆಟ್‌ನಲ್ಲಿ 49 ಶತಕಗಳನ್ನು ಬಾರಿಸುವ ಮೂಲಕ ಏಕದಿನದಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿರುವ ಆಟಗಾರ ಎಂಬ ದಾಖಲೆ ಬರೆದಿದ್ದರು. ಇದೀಗ 50ನೇ ಶತಕ ಸಿಡಿಸಿರುವ ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಈ ದಾಖಲೆಯನ್ನು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: 50ನೇ ಏಕದಿನ ಶತಕ : ಕ್ರಿಕೆಟ್ ದೇವರ ದಾಖಲೆ ಉಡೀಸ್ ಮಾಡಿದ ಕಿಂಗ್ ಕೊಹ್ಲಿ

ಈ ಪಂದ್ಯದಲ್ಲಿ 117 ರನ್​ಗಳ ಇನ್ನಿಂಗ್ಸ್ ಆಡಿದ ವಿರಾಟ್ ಕೊಹ್ಲಿ, ಈ ಶತಕದೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನೇ ಮುರಿದು ದಾಖಲೆಯ ಇತಿಹಾಸ ಸೃಷ್ಟಿಸಿದ್ದಾರೆ.

ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಈ ಇನ್ನಿಂಗ್ಸ್ ನೋಡಿದ ಎಲ್ಲರೂ ಹುಚ್ಚೆದ್ದು ಕುಣಿದರು. ಸ್ವತಃ ಸಚಿನ್ ತೆಂಡೂಲ್ಕರ್ ಕೂಡ ವಿರಾಟ್ ಕೊಹ್ಲಿಯ ಶತಕಕ್ಕೆ ಎದ್ದು ನಿಂತು ಚಪ್ಪಾಳೆ ತಟ್ಟುತ್ತ ಅಭಿನಂದನೆ ಸಲ್ಲಿಸಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸಚಿನ್ ತೆಂಡೂಲ್ಕರ್ ಹಾಡಿ ಹೊಗಳಿದ್ದಾರೆ.

Exit mobile version