Site icon PowerTV

ಶಿವಮೂರ್ತಿಗೆ ಸದ್ಯಕ್ಕಿಲ್ಲ ಬಿಡುಗಡೆಯ ಭಾಗ್ಯ

ಚಿತ್ರದುರ್ಗ: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಶಿವಮೂರ್ತಿಗೆ ಬಿಡುಗಡೆ ಇಲ್ಲ.

ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಪೋಕ್ಸೋ ಕೇಸ್​ನ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಶಿವಮೂರ್ತಿ ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ. ನಾಳೆಗೆ ಆದೇಶವನ್ನು ಚಿತ್ರದುರ್ಗ 2ನೇ JMFC ಕೋರ್ಟ್ ಕಾಯ್ದಿರಿಸಿದೆ. ಈಗಾಗಲೇ ಒಂದು ಪ್ರಕರಣದಲ್ಲಿ ಜಾಮೀನು ಮಂಜೂರಾಗಿದ್ದು, ಇನ್ನೊಂದು ಪೋಕ್ಸೊ ಪ್ರಕರಣದ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ, ನಾಳೆ ಆದೇಶ ಪ್ರಕಟಿಸಲಿದೆ.

 

Exit mobile version