Site icon PowerTV

ಬೀದಿನಾಯಿ ಕಚ್ಚಿ ಸತ್ತರೆ 5 ಲಕ್ಷ ಪರಿಹಾರ!

ಬೆಂಗಳೂರು: ಬೀದಿನಾಯಿ ಕಚ್ಚಿ ಸತ್ತರೆ 5 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 5 ಸಾವಿರ ರೂ. ನೆರವು ನೀಡಲು ನಿರ್ಧರಿಸಲಾಗಿದೆ ಎಂದು ಹೈಕೋರ್ಟ್​ಗೆ ಸರ್ಕಾರದಿಂದ ಮಾಹಿತಿ ನೀಡಲಾಗಿದೆ.

ಪ್ರಕರಣದ ಕುರಿತು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ 2023ರ ಅ.6ರಂದು ಸಭೆ ನಡೆಸಲಾಗಿದೆ.

ಇದನ್ನೂ ಓದಿ: ಯತೀಂದ್ರ ಲಿಸ್ಟ್​​ ಸೀಕ್ರೆಟ್​ ವೀಡಿಯೋ ಎಡವಟ್ಟು: ವಿಡಿಯೋ ವೈರಲ್!

ನಾಯಿ ದಾಳಿಯಿಂದ ಗಾಯಗೊಂಡವರಿಗೆ ಐದು ಸಾವಿರ ರೂ. ಹಾಗೂ ಜೀವ ಕಳೆದುಕೊಂಡವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವ ಕುರಿತು ರ್ಚಚಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮುಂದಿನ 4 ವಾರಗಳಲ್ಲಿ ತೀರ್ಮಾನ ಕೈಗೊಳ್ಳುವಂತೆ ಸೂಚಿಸಿತು.

Exit mobile version