Site icon PowerTV

ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ನಾನು ಆಕಾಂಕ್ಷಿ : ಆರ್ ಅಶೋಕ್

ಬೆಂಗಳೂರು: ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ನಾನು ಕೂಡ ಆಕಾಂಕ್ಷಿಯಾಗಿದ್ದೇನೆ. ನಾಳೆಯೇ ಹೆಸರು ಪ್ರಕಟವಾಗಲಿದೆ ಎಂದು ಬಿಜೆಪಿ ಶಾಸಕ ಆರ್ ಅಶೋಕ್ ಹೇಳಿದ್ದಾರೆ.

ಯಡಿಯೂರಪ್ಪ ನಿವಾಸ ಧವಳಗಿರಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಪಕ್ಷ ಯಾರನ್ನು ತೀರ್ಮಾನ ಮಾಡುತ್ತದೋ ಅವರಿಗೆ ಒಲಿಯುತ್ತದೆ. ನಾವಂತೂ ಅರ್ಜಿ ಹಾಕಿಲ್ಲ. ಅರ್ಜಿ ಹಾಕುವ ಸಂಸ್ಕೃತಿಯೂ ನಮ್ಮಲ್ಲಿ ಇಲ್ಲವೇ ಇಲ್ಲ ಎಂದರು.

ಇದನ್ನೂ ಓದಿ: ಅವಕಾಶ ಸಿಕ್ಕರೂ ಸ್ವಾಗತಿಸಿ, ನಾನು ಸಹಕಾರ ನೀಡುತ್ತೇನೆ

ನಮ್ಮ ಪಕ್ಷ ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಅವರನ್ನು ಘೋಷಣೆ ಮಾಡಿದೆ. ಪ್ರತಿಪಕ್ಷ ನಾಯಕ ಸ್ಥಾನ  ಕೂಡಾ ಪ್ರಮುಖ ಸ್ಥಾನ. ಈಗಾಗಲೇ ಅಭಿಪ್ರಾಯ ಸಂಗ್ರಹಣೆ ಆಗಿದೆ. ನಾಳೆ ವೀಕ್ಷಕರು ಬಂದು ಘೋಷಣೆ ಮಾಡುವುದಷ್ಟೇ ಬಾಕಿ ಇದೆ ಎಂದರು.

ಯಾರಿಗೇ ಅವಕಾಶ ಸಿಕ್ಕರೂ ಸಹಕಾರ ನೀಡುತ್ತೇನೆ

ಯಾರೇ ನೇಮಕ ಆದರೂ ನನ್ನ ತಕರಾರು ಇಲ್ಲ. ನನ್ನನ್ನೂ ಸೇರಿದಂತೆ ನಾಲೈದು ಜನ ಆಕಾಂಕ್ಷಿಗಳಿದ್ದಾರೆ ಅಂತಾ ನನಗೂ ಗೊತ್ತಿದೆ. ನಿನ್ನೆ ನಾನು ಸುನೀಲ್ ಕುಮಾರ್ ಮತ್ತು ಅಶ್ವತ್ಥ ನಾರಾಯಣ ಅವರ ಜೊತೆ ಮಾತನಾಡಿದ್ದೇನೆ. ಯಾರಿಗೇ ಅವಕಾಶ ಸಿಕ್ಕರೂ ಸ್ವಾಗತಿಸಿ, ನಾನು ಸಹಕಾರ ನೀಡುತ್ತೇನೆ’ ಎಂದರು.

 

 

Exit mobile version