Sunday, August 24, 2025
Google search engine
HomeUncategorizedಇಂಥ ಸಂವಿಧಾನ ವಿರೋಧಿಗಳನ್ನು ನಾವು ದೂರ ಇಡಬೇಕು : ಸಿದ್ದರಾಮಯ್ಯ

ಇಂಥ ಸಂವಿಧಾನ ವಿರೋಧಿಗಳನ್ನು ನಾವು ದೂರ ಇಡಬೇಕು : ಸಿದ್ದರಾಮಯ್ಯ

ಬೆಂಗಳೂರು : ಸಂವಿಧಾನ ವಿರೋಧಿಗಳು ಶರಣ ಸಾಹಿತ್ಯವನ್ನೂ ಒಪ್ಪುವುದಿಲ್ಲ. ಇಂಥ ಸಂವಿಧಾನ ವಿರೋಧಿಗಳನ್ನು ನಾವು ದೂರ ಇಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 18ನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ದ್ವೇಷ, ವೈರತ್ವ, ಸೇಡು ಮನುಷ್ಯನ ಗುಣ ಅಲ್ಲ.‌ ಪ್ರಾಣಿಗಳನ್ನು ಪ್ರೀತಿಸುವ ನಾವು ಮನುಷ್ಯರನ್ನು ಜಾತಿ, ಧರ್ಮದ ಕಾರಣಕ್ಕೆ ದ್ವೇಷಿಸುತ್ತೀವಿ. ಇದು ಅತ್ಯಂತ ಅನಾಗರಿಕ ಎಂದು ಬೇಸರಿಸಿದರು.

ಸಮಾಜದ ಋಣ ನಮ್ಮ ಮೇಲಿದೆ. ಆ ಋಣವನ್ನು ತೀರಿಸುವ ಮೂಲಕ ಬಸವಾದಿ ಶರಣರ ಆಶಯದ ಸಮಾಜ ನಿರ್ಮಾಣ ಮಾಡಬೇಕಾಗಿದೆ. ಶರಣರು ನುಡಿದಂತೆ ನಡೆದವರು. ನಾವೂ ಆ ಮಾರ್ಗದಲ್ಲಿ ನಡೆಯಬೇಕು. ನಾವು ವಿಶ್ವ ಮಾನವರಾಗದಿದ್ದರೂ ಬೇಡ, ಅಲ್ಪ ಮಾನವರಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಶರಣ ಸಾಹಿತ್ಯ ಪರಿಷತ್ತಿಗೆ ಅನುದಾನ

ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ ಒಂದೇ ಆಗಿದೆ. ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಇವೆರಡರ ಗುರಿಯೂ ಆಗಿದೆ. ಅಖಿಲ‌ ಭಾರತ ಶರಣ ಸಾಹಿತ್ಯ ಪರಿಷತ್ತಿಗೆ ಅನುದಾನ ನೀಡುವ ಬೇಡಿಕೆ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮನುಷ್ಯರಾಗಿ ಬಾಳುವುದೇ ಅತ್ಯುನ್ನತ ಧರ್ಮ

ವಚನ ಸಂಸ್ಕೃತಿ ಅಂದರೆ ಮಾನವೀಯ ಸಂಸ್ಕೃತಿ. ಮಾನವೀಯ ಬದಲಾವಣೆಯನ್ನು ಸಮಾಜದಲ್ಲಿ ತರಲು ಬಸವಾದಿ ಶರಣರು ಹೋರಾಟ ಮಾಡಿದರು. ಶೂದ್ರ ಸಮುದಾಯ ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಕಾರಣಕ್ಕೆ ಬಡತನ ಮತ್ತು ತಾರತಮ್ಯ ಹೆಚ್ಚಾಯಿತು. ಬಸವಾದಿ ಶರಣರು ಅನುಭವ ಮಂಟಪದ ಮೂಲಕ ಮೇಲು ಕೀಳಿನ, ಜಾತಿ ತಾರತಮ್ಯದ ವ್ಯವಸ್ಥೆಯನ್ನು ಅಳಿಸಿ ಮನುಷ್ಯರಾಗಿ ಬಾಳುವುದೇ ಅತ್ಯುನ್ನತ ಧರ್ಮವೆಂದು ಸಾರಿದರು ಎಂದು ಸಿದ್ದರಾಮಯ್ಯ ಹೇಳಿದರು.

ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ವಿ. ಸೋಮಣ್ಣ ಹಾಗೂ ಮತ್ತಿತರ ಗಣ್ಯರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments