Site icon PowerTV

ಜ್ಞಾನ, ಅರ್ಹತೆ ಇಲ್ಲದ ‘ನಕಲಿ ಸಾಮ್ರಾಟ’ನೇ ಕೊನೆಯ ಆಯ್ಕೆ : ಅಶೋಕ್ ಆಯ್ಕೆಗೆ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಶಾಸಕ ಆರ್‌. ಆಶೋಕ್ ಅವರನ್ನು ಕಾಂಗ್ರೆಸ್​ ಟೀಕಿಸಿದೆ.

ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ಇಂದು ಬಿಜೆಪಿ ಘೊಷಿಸಿದ ಬೆನ್ನಲ್ಲೇ ಕಾಂಗ್ರೆಸ್​ ಟ್ವೀಟ್ ಮಾಡಿ ಕುಟುಕಿದೆ. ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ‘ನಕಲಿ ಸಾಮ್ರಾಟ’ನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನ ಎಂದು ಛೇಡಿಸಿದೆ.

ಮುಂದುವರಿದು, ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ತಂದು ಕೂರಿಸಿದೆ ಬಿಜೆಪಿ ಎಂದು ಚಾಟಿ ಬೀಸಿದೆ.

ನಾನು ತರಗೆಲೆಯಲ್ಲ, ಗಟ್ಟಿ ಕಮಲ

ತಮ್ಮ ವಿರುದ್ಧ ವ್ಯಂಗ್ಯವಾಡಿರುವ ಕಾಂಗ್ರೆಸ್​ಗೆ ಆರ್​. ಅಶೋಕ್ ಸುದ್ದಿಗೋಷ್ಠೀಯಲ್ಲೇ ತಿರುಗೇಟು ನೀಡಿದ್ದಾರೆ. ‘ತುರ್ತುಪರಿಸ್ಥಿತಿ ವೇಳೆ ಹೋರಾಟ ಮಾಡಿ ಒಂದು ತಿಂಗಳು ಜೈಲಿಗೆ ಹೋಗಿದ್ದೆ. 20 ವರ್ಷಗಳ ಕಾಲ ಪಕ್ಷದ ಸಂಘಟನೆಯಲ್ಲಿ ಕೆಲಸ ಮಾಡಿದ್ದೇನೆ. ಉತ್ತರಹಳ್ಳಿ, ಪದ್ಮನಾಭನಗರ ಕ್ಷೇತ್ರದ ಜನ 7 ಬಾರಿ ಆಯ್ಕೆ ಮಾಡಿದ್ದಾರೆ. ನನ್ನದು ಒಂದೇ ಪಕ್ಷ, ಒಂದೇ ಚಿಹ್ನೆ, ಒಂದೇ ಸಿದ್ಧಾಂತ. ನಾನು ತರಗೆಲೆಯಲ್ಲ, ಗಟ್ಟಿ ಕಮಲ’ ಎಂದು ಟಕ್ಕರ್ ಕೊಟ್ಟಿದ್ದಾರೆ.

Exit mobile version