Monday, August 25, 2025
Google search engine
HomeUncategorizedಬಿ.ವೈ. ವಿಜಯೇಂದ್ರ ಹರಕೆಯ ಕುರಿ : ಕಾಂಗ್ರೆಸ್ ಟೀಕೆ

ಬಿ.ವೈ. ವಿಜಯೇಂದ್ರ ಹರಕೆಯ ಕುರಿ : ಕಾಂಗ್ರೆಸ್ ಟೀಕೆ

ಬೆಂಗಳೂರು: ಬಿಜೆಪಿ ರಾಜ್ಯಧ್ಯಾಕ್ಷ ಬಿ.ವೈ. ವಿಜಯೇಂದ್ರ ಬಳಸಿ ಬೀಸಾಡಲು ತಂದಿರುವ ಹೊಸ “ಹರಕೆಯ ಕುರಿ” ಎಂದು ಕಾಂಗ್ರೆಸ್ ಟೀಕಿಸಿದ್ದಾರೆ.

ಕಾಂಗ್ರೆಸ್ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡುವ ಮೂಲಕ ಬಿಜೆಯನ್ನು ಕಾಲೆಳಿದಿದ್ದಾರೆ. ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ..?! “ಜಾರಿದವರ ಯತ್ನ ಬೆಲ್ಲ” ಆಗ್ಲಿಲ್ಲವಲ್ಲಪ್ಪ..! ಎಂದು ಕಾಂಗ್ರೆಸ್ ಟೀಕೆ ಮಾಡಿದೆ.

ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ ಅಂತ ಹೊರಗೆ ಟೀ ಕುಡಿಯಲು ಹೋದವರು ಜಗನ್ನಾಥ ಭವನದ ಎದುರು ಟೀ ಮಾರಿಕೊಂಡು ಕೂತಿದ್ದಾರಂತೆ, ಮೋದಿ ಮಾದರಿ ಎಂದು ಲೇವಾಡಿ ಮಾಡಿದ್ದಾರೆ.

ಎಕ್ಸ್​ನಲ್ಲಿ ಕಾಂಗ್ರೆಸ್ ಟೀಕೆಗಳೇನು..? 

ಲಿಂಗಾಯತ ನಾಯಕರನ್ನು ಬಳಸಿ ಬೀಸಾಡುವುದೇ ಬಿಜೆಪಿಯ ಅಜೆಂಡಾ

◆ಯಡಿಯೂರಪ್ಪರನ್ನು ಎರಡೆರಡು ಬಾರಿ ಕಣ್ಣೀರು ಹಾಕಿಸಿ ಹುದ್ದೆಯಿಂದ ಕೆಳಗಿಳಿಸಿ ಕಳಿಸಿತ್ತು.

◆ಜಗದೀಶ್ ಶೆಟ್ಟರ್ ರವರನ್ನು ಅಧಿಕಾರದಿಂದ ದೂರವಿಟ್ಟು ವಂಚಿಸಿತ್ತು.

◆ವಿ. ಸೋಮಣ್ಣರನ್ನು ವ್ಯವಸ್ಥಿತವಾಗಿ ಸೋಲಿನ ಹೊಂಡಕ್ಕೆ ತಳ್ಳಲಾಗಿತ್ತು.

◆ಲಕ್ಷ್ಮಣ್ ಸವದಿಯವರನ್ನು ಮೂಲೆಗುಂಪು ಮಾಡಿ ಕೂರಿಸಲಾಗಿತ್ತು.

◆ಈಗ ಸಿಎಂ ಆಗಿದ್ದ ಬೊಮ್ಮಾಯಿಯವರು ಆಟಕ್ಕೂ ಇಲ್ಲ, ಲೆಕ್ಕಕ್ಕೂ ಇಲ್ಲದಂತೆ ನಿರ್ಲಕ್ಷಿಸಲಾಗಿದೆ.

ಇದೇ ಮಾದರಿಯಲ್ಲಿ ವಿಜಯೇಂದ್ರ ಕೂಡ ಬಳಸಿ ಬೀಸಾಡಲು ತಂದಿರುವ ಹೊಸ “ಹರಕೆಯ ಕುರಿ” ಅಷ್ಟೇ!

ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳುತ್ತಿವೆ. ಲೋಕಸಭಾ ಚುನಾವಣೆಗೆ ತಯಾರಿ ಶುರುವಾಗಿದೆ. ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಹುದ್ದೆಗಳೆರಡಕ್ಕೂ ಆಯ್ಕೆ ಅಂತಿಮಗೊಂಡಿದೆ. ಆದರೆ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕರಾಗಿ ಆರ್​.ಅಶೋಕ್​ರನ್ನು ಆಯ್ಕೆ ಮಾಡಿರೋದು ಅವರದೇ ಪಕ್ಷದಲ್ಲಿ ಅಸಮಾಧಾನವನ್ನು ಹುಟ್ಟುಹಾಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments