Saturday, August 23, 2025
Google search engine
HomeUncategorizedಸಿಎಂ ಬಾಯಿ ತೆರೆದರೆ ಭಗವದ್ಗೀತೆ, ನಾಲಗೆ ಮೇಲೆ ನೈತಿಕತೆಯ ನಾಟ್ಯ, ಥೂ..ನಾಚಿಕೆ ಆಗಬೇಕು : HDK...

ಸಿಎಂ ಬಾಯಿ ತೆರೆದರೆ ಭಗವದ್ಗೀತೆ, ನಾಲಗೆ ಮೇಲೆ ನೈತಿಕತೆಯ ನಾಟ್ಯ, ಥೂ..ನಾಚಿಕೆ ಆಗಬೇಕು : HDK ಟ್ವೀಟ್

ಬೆಂಗಳೂರು: ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತು ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ.. ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ ಧೂ.. ನಾಚಿಕೆ ಆಗಬೇಕು ಎಂದು ಕಾಸಿಗಾಗಿ ಹುದ್ದೆ ಹ್ಯಾಷ್ ಟ್ಯಾಗ್ ಮೂಲಕ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದಾರೆ.

ಎಕ್ಸ್​​ನಲ್ಲಿ ಸರಣಿ ಪೋಸ್ಟ್​ ಮೂಲಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್​ ಪಕ್ಷದ ವಿರುದ್ಧ ಟೀಕಾಸ್ತ್ರ ಮಾಡಿದ್ದಾರೆ.

ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್‌’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! ‘ಕಾಸಿಗಾಗಿ ಹುದ್ದೆ& ಕಾಂಗ್ರೆಸ್‌ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್‌ ಸಿಎಂ-DCM ನಿರ್ದೇಶಕ.. ಹೇಗಿದೆ..? ಎಂದು ಪ್ರಶ್ನೆಸಿದ್ದಾರೆ.

ಇದನ್ನೂ ಓದಿ: ಕನಕಪುರದಲ್ಲಿ ಹೀನಾಯವಾಗಿ ಸೋತವರು ಈಗ ವಿಪಕ್ಷ ನಾಯಕ : ಕಾಂಗ್ರೆಸ್ ಟೀಕೆ

ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್‌ & ರನ್‌ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್ ಪಡೆದಿದ್ದು ಹೇಗೆ? ‘ಬರ್ಮುಡಾ ಟ್ರ್ಯಾಂಗಲ್’ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು..ಅದು ನಿಮ್ಮ ದುರ್ವಿಧಿ. ಆನ್ಸರ್ ಮಾಡಿ ಸಿದ್ದರಾಮಯ್ಯನವರೇ..? ಎಂದು ಪ್ರಶ್ನಿಸಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments