Site icon PowerTV

ಕನಕಪುರದಲ್ಲಿ ಹೀನಾಯವಾಗಿ ಸೋತವರು ಈಗ ವಿಪಕ್ಷ ನಾಯಕ : ಕಾಂಗ್ರೆಸ್ ಟೀಕೆ

ಬೆಂಗಳೂರು: ಆರು ತಿಂಗಳ ಬಳಿಕ ವಿರೋಧ ಪಕ್ಷದ ನಾಯಕನ್ನು ಆಯ್ಕೆ ಮಾಡಿ ಬಿಜೆಪಿ ಕಾಂಗ್ರೆಸ್ ಟೀಕೆಗೆ ಗುರಿಯಾಗಿದೆ.

ಹೌದು, ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.

ಇದನ್ನೂ ಓದಿ: ಈ 2 ದಿನ ರಾಜ್ಯದಲ್ಲಿ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತ

ವಿಪಕ್ಷ ನಾಯಕ ಸಂಬಂಧ ಸರಣಿ ಎಕ್ಸ್ ಪೋಸ್ಟ್ ಮಾಡಿರುವ ರಾಜ್ಯ ಕಾಂಗ್ರೆಸ್, ವಿರೋಧ ಪಕ್ಷದ ನಾಯಕನಾಗಲು ಬೇಕಿರು ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯದಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಪಕ್ಷವು ನಾಯಕರ ಬರಗಾಲ  ಎದುರಿಸುತ್ತಿರುವುದಕ್ಕೆ ಇದು ನಿದರ್ಶನವಾಗಿದೆ.

ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ಬಿಜೆಪಿ ತಂದು ಕೂರಿಸಿದೆ ಎಂದು ಲೇವಡಿ ಮಾಡಿದೆ.

 

 

Exit mobile version