Site icon PowerTV

ಸೋಲಿನ ದುಃಖದಲ್ಲಿರುವ ಭಾರತ ತಂಡದ ಜೊತೆ ನಿಲ್ಲೋಣ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವಲ್ಲಿ ಭಾರತ ತಂಡ ಎಡವಿದೆ. ಆದರೆ, ಟೂರ್ನಿಯಲ್ಲಿ ನೀಡಿದ ಉತ್ತಮ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಸೋಲು ಹಾಗೂ ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ಭಾರತ ತಂಡದ ಜೊತೆ ನಿಲ್ಲೋಣ ಎಂದು ಹೇಳಿದ್ದಾರೆ.

ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಭಾರತ ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದ ವರೆಗಿನ ಅಜೇಯ ಅಭಿಯಾನ ಬಹುಕಾಲ ನೆನಪಿನಲ್ಲಿ ಅಚ್ಚಳಿಯದೆ ಉಳಿಯಲಿದೆ ಎಂದು ಪೋಸ್ಟ್ ಮಾಡಿದ್ದಾರೆ.

ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದೆ

ಇನ್ನೂ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಹ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೋತರೂ, ಭಾರತ ತಂಡ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದಿದೆ. ಇಡೀ ಸರಣಿಯಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದ ಭಾರತ ತಂಡದ ಬಗ್ಗೆ ಹೆಮ್ಮೆ ಇದೆ. ಆ ಎಲ್ಲ ನೆನಪುಗಳಿಗಾಗಿ ಧನ್ಯವಾದಗಳು’ ಎಂದು ಹೇಳಿದ್ದಾರೆ.

Exit mobile version