Site icon PowerTV

ಭದ್ರತಾ ಲೋಪ : ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಅಪ್ಪಿಕೊಂಡ ಅಭಿಮಾನಿ

ಅಹಮದಾಬಾದ್‌: ಏಕದಿನ ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ಭದ್ರತಾ ಲೋಪವಾಗಿದೆ. 

ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ ಸಂಭವಿಸಿದೆ. ಓರ್ವ ಅಭಿಮಾನಿ ಏಕಾಏಕಿ ಮೈದಾನಕ್ಕೆ ನುಗ್ಗಿದ್ದು, ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡಿದ್ದಾನೆ.

ಪ್ಯಾಲೆಸ್ಟೀನ್‌ ಟಿ ಶರ್ಟ್ ಧರಿಸಿದ್ದ ಅಭಿಮಾನಿಯೊಬ್ಬ ಪಂದ್ಯ ನಡೆಯುತ್ತಿರುವಾಗ ಮೈದಾನಕ್ಕೆ ನುಗ್ಗಿದ್ದು, ಬಳಿಕ ಆತ ನನ್ನು ಬಂಧಿಸಲಾಗಿದೆ. ನಂತರ ಪಂದ್ಯವನ್ನು ಪುನರಾರಂಭಿಸಲಾಗಿದೆ.

ಇದನ್ನೂ ಓದಿ: ಭಾರತದ 3ನೇ ವಿಕೆಟ್ ಪತನ : ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ ಔಟ್​

ವಿಶ್ವಕಪ್​​ ಫೈನಲ್​ನಲ್ಲಿ ಅಹಮದಾಬಾದ್​ ನಗರ ಸೇರಿದಂತೆ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 6 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಆದರೂ ಭದ್ರತಾ ಲೋಪವಾಗಿದೆ.

Exit mobile version