Site icon PowerTV

ಮಣಿಕಂಠ ರಾಠೋಡ್ ಮೇಲೆ ಕೊಲೆ ಯತ್ನ : ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು : ಮಣಿಕಂಠ ರಾಠೋಡ್ ಮೇಲೆ ಕೊಲೆ ಯತ್ನ ನಡೆದಿರುವುದಕ್ಕೆ ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯ ಕಾಂಗ್ರೆಸ್​ ಸರ್ಕಾರದ ಅರಾಜಕತೆಯ ಆಡಳಿತದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಹಾಗೂ ಕೊಲೆ ಯತ್ನಗಳು ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಆಕ್ರೋಶ ಹೊರಹಾಕಿದೆ.

ಚಿತ್ತಾಪುರ ಮತಕ್ಷೇತ್ರದ ಬಿಜೆಪಿ ಪಕ್ಷದ ಮುಖಂಡರಾದ ಮಣಿಕಂಠ ರಾಠೋಡ್ ಅವರ ಮೇಲೆ ನಡೆದಿರುವ ಕೊಲೆ ಯತ್ನ ಅತ್ಯಂತ ಖಂಡನೀಯ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಣಿಕಂಠ ರಾಠೋಡ್‌ ಅವರೊಂದಿಗೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ದೂರವಾಣಿಯಲ್ಲಿ ಮಾತನಾಡಿ ಆರೋಗ್ಯ ವಿಚಾರಿಸಿ, ಮಾನಸಿಕ ಸ್ಥೈರ್ಯ ತುಂಬಿದ್ದಾರೆ ಎಂದು ಪೋಸ್ಟ್ ಮಾಡಿದೆ.

Exit mobile version