Site icon PowerTV

World Cup 2023 : ಭಾರತ ಗೆದ್ದು ಬರಲಿ ಎಂದು ಬೊಮ್ಮಾಯಿ ವಿಶ್ 

ಬೆಂಗಳೂರು: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ನಡೆಯುವ ಫೈನಲ್ ಕ್ರಿಕೆಟ್ ಪಂದ್ಯ ನೋಡಲು ಅಭಿಮಾನಿಗಳು ಕಾಂತುರದಿಂದ ಕಾಯುತ್ತಿದ್ದಾರೆ. ಎಲ್ಲೆಡೆಯಿಂದಲೂ ಟೀಂ ಇಂಡಿಯಾಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಅಂತೆಯೇ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ವಿಶ್ ಮಾಡಿದ್ದಾರೆ.

ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಕ್ರಿಕೆಟ್ ಪೈನಲ್ ಪಂದ್ಯ ನೋಡಲು ಇಡೀ ಜಗತ್ತಿನ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ನಾನೂ ಫೈನಲ್ ಪಂದ್ಯ ನೋಡಲು ಕಾತುರನಾಗಿದ್ದೇನೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಈ ಬಾರಿ ವಿಶ್ವ ಕಪ್ ಗೆಲ್ಲುವ ಫೆವರಿಟ್ ತಂಡವಾಗಿದೆ.

ರನ್ ಮಷಿನ್ ವಿರಾಟ್ ಕೋಹ್ಲಿಯ ರನ್ ಹೊಳೆ, ಮೊಹಮದ್ ಶಮಿನ ಬಾಲಿಂಗ್ ದಾಳಿ, ಸಂಘಟಿತ ಹೋರಾಟದಿಂದ ಭಾರತ ತಂಡ ಮೂರನೇ ಬಾರಿ ವಿಶ್ವಕಪ್ ಎತ್ತಿ ಹಿಡಿಯುತ್ತದೆ ಎನ್ನುವ ಅಚಲ ವಿಶ್ವಾಸ ನನಗಿದೆ. ಭಾರತ ಕ್ರಿಕೆಟ್ ತಂಡ ಜಯಶಾಲಿಯಾಗಿ ಮೂರನೇ ಬಾರಿ ಕಿಕೇಟ್ ಲೋಕದ ವಿಶ್ವ ಚಾಂಪಿಯನ್ ಆಗಲಿ ಎಂದು ಶುಭ ಹಾರೈಸುತ್ತೇನೆ. ಗುಡ್ ಲಕ್ ಟೀಮ್ ಇಂಡಿಯಾ ಎಂದು ಶುಭ ಹಾರೈಸಿದ್ದಾರೆ.

Exit mobile version