Site icon PowerTV

ICC World Cup 2023: ಇಂದು ವಿಶ್ವಕಪ್‌ ಫೈನಲ್‌;  ಎಲ್ಲೆಡೆ ‘ಗೆದ್ದು ಬಾ ಇಂಡಿಯಾ’ ಪ್ರಾರ್ಥನೆ

ಬೆಂಗಳೂರು: ದೇಶಕ್ಕೆ ದೇಶವೇ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್‌ ಫೈನಲ್‌ ಕಾಳಕ್ಕೆ ಕಾತುರದಿಂದ ಕಾಯುತ್ತಿದೆ.

12 ವರ್ಷಗಳ ಬಳಿಕ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿರುವ ಭಾರತ ತಂಡವು ಮೂರನೇ ಬಾರಿ ಏಕದಿನ ವಿಶ್ವಕಪ್‌ ಎತ್ತಿಹಿಡಿಯಲ್ಲಿ ಎಂದು ಎಲ್ಲೆಡೆ ಪೂಜೆ ಪ್ರಾರ್ಥನೆಗಳು ನಡೆಯುತ್ತಿದೆ.ಭಾರತ ಗೆದ್ದು ಬೀಗಲಿ, ವಿಶ್ವಕಪ್‌ ರೋಹಿತ್‌ ಪಡೆಯ ಪಾಲಾಗಲಿ ದೇಶಾದ್ಯಂತ ಶತಕೋಟಿ ಭಾರತೀಯರು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ವಿಶ್ವಕಪ್‌ ಫೈನಲ್‌ ಪಂದ್ಯವು ಕುತೂಹಲ ಕೆರಳಿಸಿದೆ.

ಮ್ಯಾಚ್ ನೋಡಲು ಗಣ್ಯರು ದಂಡು 

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ಮಧ್ಯಾಹ್ನ ಪಂದ್ಯ ಆರಂಭವಾಗಲಿದ್ದು, ಗಣ್ಯರ ದಂಡೇ ಅಹಮದಾಬಾದ್‌ನಲ್ಲಿ ಬೀಡುಬಿಟ್ಟಿದೆ. ಅದರಲ್ಲೂ, ಪ್ರಧಾನಿ ನರೇಂದ್ರ ಮೋದಿ, ಅಮಿತ್​ ಶಾ, ರಿಚರ್ಡ್ ಮಾರ್ಲ್ಸ್ ಮತ್ತು ಅನೇಕ ರಾಜಕೀಯ ಗಣ್ಯರು ಈ ಪಂದ್ಯವನ್ನು ವೀಕ್ಷಿಸಲಿದ್ದಾರೆ ಎಂದು ಅಹಮದಾಬಾದ್‌ನ ಪೊಲೀಸ್ ಕಮಿಷನರ್ ಜ್ಞಾನೇಂದ್ರ ಸಿಂಗ್ ಮಲಿಕ್ ತಿಳಿಸಿದ್ದಾರೆ.

 

Exit mobile version