Site icon PowerTV

ಹಿಂದುತ್ವ ಎಂದರೆ ದಲಿತರನ್ನು ಹೊರಗಿಡುವ ಜಾತಿತ್ವ: ಸಚಿವ ಮಹವೇವಪ್ಪ!

ಬೆಂಗಳೂರು: ದಲಿತ ಪ್ರೇಮ ಎಂಬುದು ಕೇವಲ ಬಾಯಿ ಮಾತಿನಲ್ಲಿದ್ದರೇ ಸಾಲು ಕೃತಿಯಲ್ಲೂ ಇದ್ದರೇ ಚೆನ್ನ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್​.ಸಿ ಮಹದೇವಪ್ಪ ಕಿಡಿಕಾರಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಹಾಗು ವಿರೋಧ ಪಕ್ಷದ ನಾಯಕ ಸ್ಥಾನದ ಆಯ್ಕೆ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡುವ ಮೂಲಕ ಬಿಜೆಪಿ ಪಕ್ಷ ದಲಿತ ವಿರೋಧಿ ಎಂದು ಮತ್ತೊಮ್ಮೆ ಸಾಬೀತಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಸೋಲಿನ ದುಃಖದಲ್ಲಿರುವ ಭಾರತ ತಂಡದ ಜೊತೆ ನಿಲ್ಲೋಣ : ಸಿಎಂ ಸಿದ್ದರಾಮಯ್ಯ

ದಲಿತ ಪ್ರೇಮ ಎಂಬುದು ಬಾಯಿ ಮಾತಿನ ಸರಕಾಗಬಾರದು. ಅದು ಕೃತಿಯಲ್ಲೂ ಇದ್ದರೆ ಚೆನ್ನ. ಚುನಾವಣೆಗೆ ಮೊದಲು ಮತ್ತು ನಂತರದಲ್ಲಿ ದಲಿತರಿಗೆ ಸ್ಥಾನ ನೀಡಿ ಎನ್ನುತ್ತಿದ್ದ ಬಿಜೆಪಿಗರು ವಿಪಕ್ಷೀಯ ಸ್ಥಾನಕ್ಕೆ ಅಥವಾ ರಾಜ್ಯಾಧ್ಯಕ್ಷ ಸ್ಥಾನಕ್ಕೆ ದಲಿತರನ್ನೇ ನೇಮಿಸಬಹುದು ಎಂದುಕೊಂಡಿದ್ದೆ. ಆದರೆ ಅದು ಹಾಗಾಗಲಿಲ್ಲ ಹಿಂದುತ್ವ ಎಂದರೆ ದಲಿತರನ್ನು ಹೊರಗಿಡುವ ಜಾತಿತ್ವ ಎಂದು ಮತ್ತೊಮ್ಮೆ ಸಾಬೀತಾಯಿತು. ದಲಿತ ವಿರೋಧಿ ಬಿಜೆಪಿ ಎಂದು ಡಾ. ಹೆಚ್.​ಸಿ. ಮಹದೇವಪ್ಪ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

Exit mobile version