Thursday, September 11, 2025
HomeUncategorizedಪ್ರಿಯಾಂಕ್ ಖರ್ಗೆ ಪುಢಾರಿಗಳನ್ನು ಬಿಟ್ಟು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿಸಿದ್ದಾರೆ : ಬಿ.ವೈ. ವಿಜಯೇಂದ್ರ

ಪ್ರಿಯಾಂಕ್ ಖರ್ಗೆ ಪುಢಾರಿಗಳನ್ನು ಬಿಟ್ಟು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿಸಿದ್ದಾರೆ : ಬಿ.ವೈ. ವಿಜಯೇಂದ್ರ

ಮೈಸೂರು : ನಮ್ಮ ಪಕ್ಷದ ಕಾರ್ಯಕರ್ತ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಣಿಕಂಠ ರಾಠೋಡ ಅವರ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ ರಾಜಕೀಯ ಪುಢಾರಿಗಳನ್ನು ಬಿಟ್ಟು ಶನಿವಾರ ಮಧ್ಯರಾತ್ರಿ ಹಲ್ಲೆ ಮಾಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಂದಿನ ದಿನಗಳಲ್ಲಿ ಎಲ್ಲವೂ ಸುಸೂತ್ರವಾಗಿ ನಡೆದುಕೊಂಡು ಹೋಗಬೇಕು ಎನ್ನುವುದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ಪ್ರಿಯಾಂಕ್​ ಖರ್ಗೆ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಅಧಿಕಾರದ ಅಮಲಿನಲ್ಲಿ ರಾಜ್ಯ ಸರ್ಕಾರ ತೇಲಾಡುತ್ತಿದೆ. ಹಲವೆಡೆ ಬರವಿದ್ದರೂ ಅದರ ಬಗ್ಗೆ ಚರ್ಚೆ ಮಾಡಿಲ್ಲ. ಅಭಿವೃದ್ಧಿ ಕಾರ್ಯಗಳೂ ಸ್ಥಗಿತಗೊಂಡಿದೆ. ಕಾಂಗ್ರೆಸ್‌ ಶಾಸಕರಿಗೆ ತಮ್ಮ ಕ್ಷೇತ್ರದಲ್ಲಿ ತಲೆ ಎತ್ತಿಕೊಂಡು ಓಡಾಡಲು ಆಗದಂತಹ ಪರಿಸ್ಥಿತಿ ಬಂದೊದಗಿದೆ. ಇದು ರೈತ ವಿರೋಧಿ ಸರ್ಕಾರ, ಬಡವರ ವಿರೋಧಿ ಸರ್ಕಾರ ಎಂದು ರಾಜ್ಯದ ಜನರು ಕಾಂಗ್ರೆಸ್‌ಗೆ ಶಾಪ ಹಾಕುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ

ಇದೇ ವೇಳೆ ಮೈಸೂರಿನ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಸೋಮೇಶ್ವರ ನಾಥ ಸ್ವಾಮಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಉಪಾಧ್ಯಕ್ಷ ಎಂ. ರಾಜೇಂದ್ರ, ಸಂಸದ ಪ್ರತಾಪ್ ಸಿಂಹ, ಶಾಸಕ ಟಿ.ಎಸ್. ಶ್ರೀವತ್ಸ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments