Site icon PowerTV

ಕಾರು ಅಪಘಾತ: ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪಆಸ್ಪತ್ರೆಗೆ ದಾಖಲು

ವಿಜಯಪುರ: ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆಯೂ ಆಗಿರುವ ಬಾಗಲಕೋಟೆ ಜಿಲ್ಲಾ ಪಂಚಾಯತ್​ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಕಾರು ಅಪಘಾತಕ್ಕೀಡಾಗಿದೆ.

ಅಪಘಾತದಲ್ಲಿ ವೀಣಾ ಕಾಶಪ್ಪನವರ ಹಾಗೂ ಕಾರನಲ್ಲಿದ್ದ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭಾಗಿಯಾಗಿದ್ದ ಅಖಿಲ ಭಾರತ 70 ನೇ ಸಹಕಾರ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ವಾಪಾಸ್ಸಾಗುತ್ತಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಮನೆಯಲ್ಲಿ ಬಿರಿಯಾನಿ ತಿಂದ 17 ಜನರು ಅಸ್ವಸ್ಥ

ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿ ಈ ಅಫಘಾತ ನಡೆದಿದ್ದು, ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ಮುಂದಿನ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಫಘಾತ ಸಂಭವಿಸಿದೆ. ಗಾಯಗೊಂಡಿರುವ ವೀಣಾ ಅವರನ್ನು ವಿಜಯಪುರ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version