Site icon PowerTV

ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ಅಷ್ಟೇ ಸತ್ಯ : ಶಾಸಕ ವಿಶ್ವಾಸ್ ವೈದ್ಯ

ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಕಾಂಗ್ರೆಸ್​ ಶಾಸಕ ವಿಶ್ವಾಸ್ ವೈದ್ಯ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು,ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ. ಸತೀಶ್ ಜಾರಕಿಹೊಳಿ​​ ಪ್ರಭಾವಿ ನಾಯಕರಾಗಿ ಹೊರ ಹೊಮ್ಮುತ್ತಿದ್ದಾರೆ. ಸತೀಶ್​ ಜಾರಕಿಹೊಳಿಯನ್ನು ಸಿಎಂ ಆಗಿ ನೋಡಬೇಕೆಂದು ಹೇಳುತ್ತಿದ್ದಾರೆ.

ಮುಂದಿನ ದಿನದಲ್ಲಿ ಬೆಳಗಾವಿ ಗಡಿ ಭಾಗದಿಂದ ಒಬ್ಬ ಸಿಎಂ ಆಗುತ್ತಾರೆ. ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ ಸತೀಶ್ ಜಾರಕಿಹೊಳಿ ಅಣ್ಣ ಸಿಎಂ ಆಗುವುದು ಕೂಡ ಅಷ್ಟೇ ಸತ್ಯ ಎಂದರು.

ಸತೀಶ್ ಜಾರಕಿಹೊಳಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ವಿಶ್ವಾಸ್ ವೈದ್ಯ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಮೊದಲೇ ಕೆಲ ಕಾರಣಾಂತರಗಳಿಂದ ಸತೀಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದು, ತಮ್ಮ ರಾಜಕೀಯ ವರಸೆ ತೋರಿಸಲು ಮುಂದಾಗಿದ್ದರು. ಇದಕ್ಕೆ ಹೈಕಮಾಂಡ್ ಬ್ರೇಕ್ ಹಾಕಿ ಅಸಮಾಧಾನವನ್ನು ಶಮನ ಮಾಡಲು ಮುಂದಾಗಿದ್ದಾರೆ.

 

Exit mobile version