Site icon PowerTV

ನಿಗಮ, ಮಂಡಳಿ ನೇಮಕಾತಿ ಕಗ್ಗಂಟು: ಸಿಎಂ, ಡಿಸಿಎಂ ನಡುವೆ ಒಮ್ಮತ ಮೂಡಿಸಲು ಸುರ್ಜೇವಾಲ ಕಸರತ್ತು 

ಬೆಂಗಳೂರು: ನಿಗಮ, ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದರು ಇನ್ನೂ ನೇಮಕಾತಿಯ ಗೊಂದಲ ಮುಂದುವರಿಯುತ್ತಲೇ ಇದೆ.

ಈ ಸಂದರ್ಭದಲ್ಲಿ ಸುರ್ಜೇವಾಲ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅಭಿಪ್ರಾಯ ಆಲಿಸಿದರು. ಸುದೀರ್ಘವಾಗಿ ಚರ್ಚಿಸಿದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ನಿಗಮ, ಮಂಡಳಿ ನೇಮಕಾತಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರಲ್ಲಿ ಅಸಮಾಧಾನ ತೀವ್ರಗೊಂಡಿದೆ.

ಇದನ್ನೂ ಓದಿ: ಬಿಡದಿಯಲ್ಲಿ 3ನೇ ಕಾರು ಉತ್ಪಾದನಾ ಘಟಕ ಆರಂಭಿಸಲು ಟೊಯೋಟಾ: ಸರ್ಕಾರದ ನಡುವೆ ಒಡಂಬಡಿಕೆ

ಇನ್ನೊಂದೆಡೆ, ಇಬ್ಬರು ನಾಯಕರಲ್ಲಿ ಒಮ್ಮತ ಮೂಡಿಸಲು ಪಕ್ಷದ ಹಿರಿಯ ನಾಯಕರು ಹರಸಾಹಸ ಪಡುತ್ತಿದ್ದಾರೆ.  ಸಿದ್ದರಾಮಯ್ಯ ಮೊದಲು ಶಾಸಕರನ್ನು ನಿಗಮ, ಮಂಡಳಿಗೆ ನೇಮಿಸುವಂತೆ ಒತ್ತಾಯಿಸುತ್ತಿದ್ದರೆ, ಡಿಕೆಶಿ ಪಕ್ಷದ ಕಾರ್ಯಕರ್ತರಿಗೆ ನೇಮಕಾತಿಯಲ್ಲಿ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಡಿಕೆಶಿ 70:30 ಅನುಪಾತದಲ್ಲಿ ಶಾಸಕರು ಹಾಗೂ ಪಕ್ಷದ ಕಾರ್ಯಕರ್ತರಿಗೆ ನಿಗಮ, ಮಂಡಳಿಯಲ್ಲಿ ಸ್ಥಾನ ಕಲ್ಪಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

 

 

Exit mobile version