Site icon PowerTV

HDK ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳ ವಿರುದ್ಧ ಜೆಡಿಎಸ್ ಮುಖಂಡರು ದೂರು!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅಶ್ಲೀಲ, ಕೀಳು ಅಭಿರುಚಿಯ ಪೋಸ್ಟರ್ ಗಳನ್ನು ಗೋಡೆಗಳ ಮೇಲೆ ಅಂಟಿಸಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ಆಯುಕ್ತರಿಗೆ ಜೆಡಿಎಸ್ ಪಕ್ಷದ ಮುಖಂಡು ಇಂದು ದೂರು ನೀಡಿದರು.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ ಹಾಗೂ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ದಯಾನಂದ ಅವರಿಗೆ ದೂರು ನೀಡಿದರು.

ಇದನ್ನೂ ಓದಿ: ಸಾಂತ್ವನ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ದೀಪಾವಳಿ ಹಬ್ಬದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರ ಬೆಂಗಳೂರಿನ ನಿವಾಸಕ್ಕೆ ದೀಪಾಲಂಕಾರ ಮಾಡಲಾಗಿತ್ತು, ಈ ದೀಪಾಲಂಕಾರಕ್ಕೆ ಬೆಸ್ಕಾಂನಿಂದ ಯಾವುದೇ ಅನುಮತಿ ಪಡೆಯದೆ ನೇರವಾಗಿ ಬೆಸ್ಕಾಂನ ವಿದ್ಯುತ್ ಕಂಬದಿಂದ ವಿದ್ಯುತ್​ ಪೂರೈಕೆ ಮಾಡಿಕೊಂಡಿದ್ದರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದವು.

ಈ ಘಟನೆ ನಡೆದ ಬಳಿಕ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿಯವರ ವಿರುದ್ದ ಕುಮಾರಸ್ವಾಮಿ ಕರೆಂಟ್​ ಕಳ್ಳ ಎಂಬ ಪೋಸ್ಟರ್​ಗಳನ್ನು ಅಂಟಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಇಂದು ಬೆಂಗಳೂರು ನಗರ ಪೊಲೀಸ್​ ಆಯುಕ್ತರಾದ ದಯಾನಂದ್ ಅವರಿಗೆ ಕಿಡಿಗೇಡಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಜೆಡಿಎಸ್ ಮುಖಂಡರು ದೂರು ಸಲ್ಲಿಸಿದರು.

Exit mobile version