Site icon PowerTV

ಎಲ್ಲರನ್ನೂ ಜೊತೆಗೆ ಕರೆದೊಯ್ಯುವುದು ನನ್ನ ಜವಾಬ್ದಾರಿ: ಬಿ.ವೈ ವಿಜಯೇಂದ್ರ

ಬೆಂಗಳೂರು: ಪಕ್ಷದಲ್ಲಿ ಎಲ್ಲರನ್ನೂ ಜೊತೆಗೆ ಕರೆದೊಯ್ಯುವುದು ನನ್ನ ಜವಾಬ್ದಾರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಭೇಟಿ ಬಳಿಕ ಮಾತನಾಡಿದ ಅವರು, ಜಾರಕಿಹೊಳಿ ನಡೆ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆಯುತ್ತಿತ್ತು. ಕೆಲವು ಬಾರಿ ಶಾಸಕ ರಮೇಶ್ ಅಸಮಾಧಾನ ತೋಡಿಕೊಂಡಿದ್ದರು. ಹೀಗಾಗಿ ರಮೇಶ್ ಭೇಟಿ ಮಾಡಿ ಅರ್ಧಗಂಟೆ ಚರ್ಚೆ ಮಾಡಿದ್ದೇನೆ.

ಇದನ್ನೂ ಓದಿ: ಕರಾವಳಿಯಿಂದ ಬೆಂಗಳೂರಿನತ್ತ ಕೋಣಗಳ ಪ್ರಯಾಣ ಹೇಗಿರಲಿದೆ..?

ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗಬೇಕು. ಪಕ್ಷದಲ್ಲಿ ಸಹಕಾರ ಕೊಡೋದಾಗಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಕೆಲವು ಸಣ್ಣ ಪುಟ್ಟ ಅಸಮಾಧಾನಗಳಿದ್ದವು, ಅದರ ಬಗ್ಗೆ ಚರ್ಚಿಸಿದ್ದೇವೆ ಎಂದರು.\

ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಸೋಮಣ್ಣ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಪಕ್ಷದ ಹಿರಿಯರು ಏನೇ ಮಾತಾಡಿದರೂ ಆಶೀರ್ವಾದ ಅಂದುಕೊಳ್ಳುತ್ತೇನೆ. ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗುತ್ತೇನೆ ಎಂದು ಅವರು ಸಾಮಾಜಿಕ ಜಾಲತಾದಲ್ಲಿ ಬರೆದುಕೊಂಡಿದ್ದಾರೆ.

 

Exit mobile version