Site icon PowerTV

ಭ್ರಷ್ಟಾಚಾರದಲ್ಲಿ ರಾಜಸ್ಥಾನವನ್ನು ಕಾಂಗ್ರೆಸ್ ನಂಬರ್ 1 ಮಾಡಿದೆ : ಪ್ರಧಾನಿ ಮೋದಿ

ರಾಜಸ್ಥಾನ : ಭ್ರಷ್ಟಾಚಾರ, ಗಲಭೆ, ಅಪರಾಧ ಹಾಗೂ ಪೇಪರ್ ಸೋರಿಕೆಯಲ್ಲಿ ರಾಜಸ್ಥಾನವನ್ನು ಕಾಂಗ್ರೆಸ್ ನಂಬರ್ 1 ಮಾಡಿದೆ ಎಂದು ಕಾಂಗ್ರೆಸ್​ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ದಿಯೋಗರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಮಳೆ ಸುರಿಸಿದ್ದಾರೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದಿನ ಬಿಜೆಪಿ ಸರ್ಕಾರಗಳ ಎಲ್ಲಾ ಯೋಜನೆಗಳನ್ನು ನಿಲ್ಲಿಸಿದೆ ಎಂದು ಕುಟುಕಿದ್ದಾರೆ.

ಡಿಸೆಂಬರ್ 3 ರಂದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಾಗ, ನಾವು ರಾಜ್ಯದ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಮತ್ತೆ ಆರಂಭಿಸುತ್ತೇವೆ. ಈ ಮೂಲಕ ರಾಜಸ್ಥಾನವನ್ನು ಅಭಿವೃದ್ಧಿಯ ದಿಕ್ಕಿಗೆ ಕೊಂಡೊಯ್ಯುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಬಿಜೆಪಿ ಸರ್ಕಾರ ರಚಿಸುವುದು ಗ್ಯಾರಂಟಿ

ಈ ಬಾರಿ ರಾಜಸ್ಥಾನ, ಛತ್ತೀಸ್‍ಗಢ ಹಾಗೂ ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ. ಈ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲಿದೆ. ಇಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರವಾಸೋದ್ಯಮ, ಹೂಡಿಕೆ, ಕೈಗಾರಿಕೆ ಮತ್ತು ಶಿಕ್ಷಣದಲ್ಲಿ ರಾಜ್ಯವನ್ನು ನಂಬರ್ 1 ಸ್ಥಾನಕ್ಕೆ ಕೊಂಡೊಯ್ಯಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Exit mobile version