Site icon PowerTV

ಕರ್ನಾಟಕದ ರಾಜಕಾರಣದಲ್ಲಿ ಕಾಂಗ್ರೆಸ್​ ಕರಾಳ ಇತಿಹಾಸ ಬರೆಯಲಿದೆ​: ವಿಜಯೇಂದ್ರ!

ಬೆಂಗಳೂರು : ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಿಬಿಐ ತನಿಖೆಯ ಕೇಸ್ ಹಿಂದೆ ಪಡೆದಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.​​

ಸಂವಿಧಾನದ ಘನತೆ, ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯುವ ನಿಟ್ಟಿನಲ್ಲಿ, ತನ್ನದಲ್ಲದ ತಪ್ಪಿಗೂ ನೈತಿಕ ಹೊಣೆ ಹೊತ್ತು ಅಧಿಕಾರ ತ್ಯಾಗ ಮಾಡಿದ ಹಲವು ಮಹನೀಯರು ರಾಜಕಾರಣದಲ್ಲಿ ಇತಿಹಾಸ ಬರೆದು ಹೋಗಿದ್ದಾರೆ. ಕರ್ನಾಟಕದ ರಾಜಕಾರಣಕ್ಕೆ ಕರಾಳ ಇತಿಹಾಸ ಬರೆಯಲೆಂದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ತನ್ನ ಸಂಪುಟ ಸದಸ್ಯ ಡಿಸಿಎಂ ಡಿ.ಕೆ ಶಿವಕುಮಾರ್‌ರವರ ಮೇಲಿರುವ ಸಿಬಿಐ ತನಿಖೆಯ ಕೇಸ್ ಹಿಂತೆಗೆದುಕೊಳ್ಳಲು ನಿರ್ಧರಿಸಿದೆ.

ಇದನ್ನೂ ಓದಿ: ಕೊಡಲಿ ರೂಪದ ಪೆನ್ಸಿಲ್​ ಹಿಡಿದ ಶಾಲಾ ಮಕ್ಕಳು: ಪೋಷಕರು ಆಕ್ರೋಶ !

ಸರ್ಕಾರದ ಈ ನಿಲುವು ಸಾಂವಿಧಾನಿಕ ಹಾಗೂ ಪ್ರಜಾತಂತ್ರ ವ್ಯವಸ್ಥೆಯ ಮೇಲೆ ಸವಾರಿ ಮಾಡಿದ ಕ್ರಮವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ವಿರುದ್ದ ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Exit mobile version