Site icon PowerTV

ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರೆ ನ.26ಕ್ಕೆ ಉದ್ಘಾಟನೆ!

ಬೆಂಗಳೂರು : ಹಿರಿಯ ನಟಿ ಲೀಲಾವತಿ ಅವರ ಕನಸಿನ ಆಸ್ಪತ್ರೆ ನಾಳೆ ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ಆಗಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಶು ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಲೀಲಾವತಿ ಅವರ ಆಸೆ ಇದಾಗಿದ್ದು, ಸರ್ಕಾರ ಅದಕ್ಕೆ ಸಮ್ಮತಿ ನೀಡಿದೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಸುಸಜ್ಜಿತ ಪಶು ಆಸ್ಪತ್ರೆಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಾಣ ಮಾಡಿರುವ ಲೀಲಾವತಿ ಮತ್ತು ವಿನೋದ್ ರಾಜ್, ಹಿಂದೆ ಜನರಿಗಾಗಿ ಮತ್ತೊಂದು ಆಸ್ಪತ್ರೆಯನ್ನೂ ನಿರ್ಮಿಸಿದ್ದರು. ಈ ಆಸ್ಪತ್ರೆಯನ್ನೂ ಸರಕಾರವೇ ನೋಡಿಕೊಳ್ಳುತ್ತಿದೆ.

ಇದನ್ನೂ ಓದಿ: ಪ್ರವಾಸಿಗರ ಜೀಪ್​​​​ ಅಟ್ಟಾಡಿಸಿದ ಕಾಡಾನೆಗಳು!

ನಟಿ ಲೀಲಾವತಿ ಅವರು ಅನಾರೋಗ್ಯ ಪೀಡಿತರಾಗಿರುವ ಹಿನ್ನೆಲೆ ಕನ್ನಡ ಚಿತ್ರರಂಗದ ನಟ ನಟಿಯರು, ಸಹ ಕಲಾವಿದರು ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಮತ್ತು ವಿನೋದ್​ ರಾಜ್​ ಅವರ ತೋಟದ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಲೀಲಾವತಿಯವರ ಸಮಾಹಮುಖ ಕಾರ್ಯಗಳಿಗೆ ಇಲ್ಲಿನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Exit mobile version