Site icon PowerTV

ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಲಿರುವ ಅಶ್ವಿನಿ ಪುನೀತ್ ರಾಜಕುಮಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬೆಳಗ್ಗೆ 10.30ಕ್ಕೆ ನಟ ಪುನೀತ್‌ರಾಜಕುಮಾರ್ ಅವರ ಪತ್ನಿ ಅಶ್ವಿನಿ ಅವರು ‘ಕಂಬಳ ಕರೆ’ಗೆ ಚಾಲನೆ ನೀಡಲಿದ್ದಾರೆ.

ಮುಖ್ಯಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಜೆ 5.30ಕ್ಕೆ ಉದ್ಘಾಟಿಸಲಿದ್ದಾರೆ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಇದನ್ನೂ ಓದಿ: Bigg Boss Season 10: ಜೈಲಿನಿಂದ ಎಸ್ಕೇಪ್​ ಆದ ವರ್ತೂರ್‌ ಸಂತೋಷ್‌!

ನಗರದ ಅರಮನೆ ಮೈದಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರ ಬೆಳಗ್ಗೆ 11 ಗಂಟೆಯ ಬಳಿಕ ಹಲವು ನಟ ನಟಿಯರು ಭಾಗಿಯಾಗುತ್ತಾರೆ. ಸಂಜೆಯ ಸಭಾ ಕಾರ್ಯಕ್ರಮದಲ್ಲಿ ಸಂಪುಟ ಸಚಿವರು, ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ. ಭಾನುವಾರ(ನ.26) ಸಂಜೆ 5.30ಕ್ಕೆ ಕಂಬಳದ ಸಮಾರೋಪ ಕಾರ್ಯಕ್ರಮ ನಡೆಯುತ್ತದೆ ಎಂದು ಮಾಹಿತಿ ನೀಡಿದರು.

 

Exit mobile version