Site icon PowerTV

ನಾಳೆ ಭಾರತ-ಆಸಿಸ್ ಎರಡನೇ ಟಿ-20 ಪಂದ್ಯ : ಯಾರಿಗೆ ಕೊಕ್? ಯಾರಿಗೆ ಲಕ್?

ಬೆಂಗಳೂರು : ನಾಳೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಎರಡನೇ ಟಿ-20 ಪಂದ್ಯ ತಿರುವನಂತಪುರಂನಲ್ಲಿ ನಡೆಯಲಿದ್ದು, ತಂಡದಲ್ಲಿ (ಪ್ಲೇಯಿಂಗ್ 11) ಹಲವು ಬದಲಾವಣೆ ಮಾಡುವ ಸಾಧ್ಯತೆಯಿದೆ.

5 ಪಂದ್ಯಗಳ ಸರಣಿಯಲ್ಲಿ ಭಾರತ ಮೊದಲ ಪಂದ್ಯ ಗೆದ್ದು 1-0 ಮುನ್ನಡೆ ಕಾಯ್ದುಕೊಂಡಿದೆ. ಸೂರ್ಯಕುಮಾರ್ ಯಾದವ್ ಪಡೆ ಇದೀಗ, ಎರಡನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಸಾಧಿಸುವ ತವಕದಲ್ಲಿದೆ.

ವಿಶಾಖಪಟ್ಟಣಂನಲ್ಲಿ ನಡೆದ ಮೊದಲ ಟಿ-20 ಪಂದ್ಯದಲ್ಲಿ ಬೌಲರ್‌ಗಳು ದುಬಾರಿಯಾಗಿದ್ದರು. ಮುಖೇಶ್ ಕುಮಾರ್ ಬಿಟ್ಟು ಉಳಿದ ಯಾವ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಲಿಲ್ಲ. ಹೀಗಾಗಿ, ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡುವ ಸಾಧ್ಯತೆಯಿದೆ.

ಭಾರತ ಸಂಭಾವ್ಯ ತಂಡ

ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್/ಅವೇಶ್ ಖಾನ್, ಅರ್ಶದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.

ಆಸ್ಟ್ರೇಲಿಯಾ ಸಂಭಾವ್ಯ ತಂಡ

ಟ್ರಾವಿಸ್ ಹೆಡ್/ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ನಾಯಕ & ವಿಕೆಟ್ ಕೀಪರ್), ಸೀನ್ ಅಬಾಟ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆನ್‌ಡಾರ್ಫ್, ಆಡಮ್ ಝಂಪಾ.

Exit mobile version