Site icon PowerTV

ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ ಭೇಟಿ: HAL ಕಾರ್ಯಕ್ರಮದಲ್ಲಿ ಭಾಗಿ

ನವದೆಹಲಿ: ಎಚ್‌ಎಎಲ್ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಮೋದಿ ಬೆಳಿಗ್ಗೆ 9.15ಕ್ಕೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ವಿಜಯಪುರಕ್ಕೆ ನಾನೇ ಸಿಎಂ ಎಂದ ಯತ್ನಾಳ್ 

ತೇಜಸ್‌ ಜೆಟ್‌ಗಳ ಸೌಲಭ್ಯ ಸೇರಿದಂತೆ ಅವುಗಳ ಉತ್ಪಾದನಾ ಸೌಲಭ್ಯವನ್ನು ಪರಿಶೀಲಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಚುನಾವಣಾ ಪ್ರಚಾರಕ್ಕಾಗಿ ಅವರು ತೆಲಂಗಾಣಕ್ಕೆ ಪ್ರಯಾಣ ಬೆಳಸಲಿದ್ದಾರೆ. ಭಾರತೀಯ ವಾಯುಪಡೆ ಇತ್ತೀಚೆಗೆ 12 Su-30MKI ಯುದ್ಧವಿಮಾನಗಳನ್ನು ಖರೀದಿಸಲು ಸರ್ಕಾರಿ ಸ್ವಾಮ್ಯದ ಎಚ್‌ಎಎಲ್‌ಗೆ ಟೆಂಡರ್ ನೀಡಿತ್ತು.

Exit mobile version