Site icon PowerTV

900 ಹೆಣ್ಣು ಭ್ರೂಣ ಹತ್ಯೆ: 2 ವೈದ್ಯರ ಸಹಿತ 9 ಮಂದಿ ಅರೆಸ್ಟ್

ಬೆಂಗಳೂರು/ಮೈಸೂರು: ಪ್ರಾಣ ಉಳಿಸಬೇಕಾದವರೇ ಜೀವ ತಗೆಯುವ ಕೃತ್ಯವನ್ನು ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. 

ಹೌದು,ಹೆಣ್ಣು ಭ್ರೂಣಗಳನ್ನು ಪತ್ತೆ ಮಾಡಿ ಅಬಾರ್ಶನ್ ಮಾಡಿಸುತ್ತಿದ್ದ ನಾಲ್ಕು ಮಂದಿಯ ಗ್ಯಾಂಗ್‌ ಅನ್ನು  ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತನಿಖೆ ವೇಳೆ ಹೆಣ್ಣು ಭ್ರೂಣಗಳನ್ನು ಪತ್ತೆ ಮಾಡಿ ಹತ್ಯೆ (ಅಬಾರ್ಶನ್) ಮಾಡಿಸುತ್ತಿದ್ದರು ಎಂಬ ವಿಚಾರ ಬಯಲಿಗೆ ಬಂದಿದ್ದು, ಈ ನಾಲ್ವರು ಖದೀಮರು ಗರ್ಭಿಣಿಯರನ್ನು ಗುರುತು ಮಾಡಿ ಸ್ಕ್ಯಾನ್ ಮಾಡಿಸುತ್ತಿದ್ದರು. ಹೆಣ್ಣು ಭ್ರೂಣವಾದರೆ ಅಬಾರ್ಶನ್ ಮಾಡುತ್ತಿದ್ದರು.

ಮೈಸೂರಿನ ಮಾತಾ ಆಸ್ಪತ್ರೆ ಹಾಗೂ ಅಲ್ಲಿನ ರಾಜ್‌ಕುಮಾರ್ ರಸ್ತೆಯಲ್ಲಿರುವ ಆಯುರ್ವೇದಿಕ್ ಪೈಲ್ ಡೇ ಕೇರ್ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಡಾ. ಚಂದನ್, ಇದುವರೆಗೂ 900 ಗರ್ಭಪಾತ ಮಾಡಿಸಿ, ಹೆಣ್ಣು ಭ್ರೂಣ ಹತ್ಯೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಕಳೆದ ಅಕ್ಟೋಬರ್ ತಿಂಗಳಲ್ಲಿ ನಾಲ್ವರನ್ನು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿತ್ತು. ಈ ನಾಲ್ವರು ಆರೋಪಿಗಳು ಗರ್ಭಿಣಿಯರನ್ನು ಗುರುತು ಮಾಡಿ ಮಂಡ್ಯದ ಆಲೆಮನೆಯೊಂದರಲ್ಲಿ ಸ್ಕ್ಯಾನ್ ಮಾಡಿಸುತಿದ್ದರು. ಒಟ್ಟು  ಒಂಬತ್ತು ಮಂದಿ ಸೇರಿ ಸಿಂಡಿಕೇಟ್ ಮಾಡಿಕೊಂಡು ವ್ಯವಸ್ಥಿತವಾಗಿ ಕೃತ್ಯ ಎಸಗುತಿದ್ದರು ಎಂದು ತಿಳಿದು ಬಂದಿದ್ದು, ಅರೋಪಿಗಳು ತಿಂಗಳಲ್ಲಿ 20-25 ಭ್ರೂಣ ಹತ್ಯೆ ಮಾಡ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಈ ಕೃತ್ಯ ಎಸಗುತ್ತಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: ಮುಂಬೈ ಭಯೋತ್ಪಾದಕ ದಾಳಿ: ಇಂದಿಗೆ 15 ವರ್ಷ !

ಈ ಹಿಂದೆ ಶಿವನಂಜೇ ಗೌಡ, ವೀರೇಶ್, ನವೀನ್ ಮತ್ತು ನಯನ್ ಎಂಬುವವರನ್ನು ಈ ಪ್ರಕರಣದಲ್ಲಿ ಅರೆಸ್ಟ್ ಮಾಡಲಾಗಿತ್ತು. ಪೊಲೀಸರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರೆಸಿದಾಗ ವೈದ್ಯರ ಕೈವಾಡವೂ ಪತ್ತೆಯಾಗಿದ್ದು, ಸದ್ಯ ಭ್ರೂಣ ಹತ್ಯೆ ಮಾಡುತಿದ್ದ ವೈದ್ಯರನ್ನೂ ಸಹ ಅರೆಸ್ಟ್ ಮಾಡಲಾಗಿದೆ.

ಜೊತೆಗೆ ಚನ್ನೈ ಮೂಲದ ಡಾ.ತುಳಸಿರಾಮ್, ಮೈಸೂರಿನ ಮಾತ ಆಸ್ಪತ್ರೆಯ ವೈದ್ಯ ಡಾ.ಚಂದನ್ ಬಲ್ಲಾಳ್ ಹಾಗೂ ಪತ್ನಿ ಮೀನಾ, ಮೈಸೂರಿನ ಖಾಸಗಿ ಆಸ್ಪತ್ರೆಯ ರಿಸೆಪ್ಶನಿಸ್ಟ್ ರೀಜ್ಮಾ, ಲ್ಯಾಬ್ ಟೆಕ್ನೀ಼ಶಿಯನ್ ನಿಸ್ಸಾರ್ ಎಂಬುವವರನ್ನೂ ಅರೆಸ್ಟ್ ಮಾಡಲಾಗಿದೆ.

 

Exit mobile version