Site icon PowerTV

ಕಾರ್ಯಕರ್ತರು ಯಾವುದಕ್ಕೂ ಅಂಜಬೇಕಿಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಯಾವುದಕ್ಕೂ ಅಂಜಬೇಕಿಲ್ಲ ಎದೆಗುಂದ ಬೇಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸರು ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ, ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ಧ್ವನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ. ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ ಎಂದರು

ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ನೆರವಿಗೆ ಬರಲಿದೆ.

ಇಷ್ಟರಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಛೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದು ಅವರು ಟ್ವೀಟ್ ಮಾಡಿ ಕಾರ್ಯಕರ್ತರನ್ನೂ ಹುರಿದುಂಬಿದ್ದಾರೆ.

Exit mobile version