Site icon PowerTV

ಕಾಂಗ್ರೆಸ್ ಸರ್ಕಾರ 5 ವರ್ಷ ನಡೆಯಲಿ, ಯಾವುದೇ ಆಪರೇಷನ್ ಕಮಲ ಮಾಡಲ್ಲ : ಶ್ರೀರಾಮುಲು

ಕೋಲಾರ : ರಾಜ್ಯದ ಜನ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ, 5 ವರ್ಷಗಳ ಕಾಲ ನಡೆಯಲಿ ಬಿಡಿ. ಸರ್ಕಾರಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಕೋಲಾರದ ಮುಳಬಾಗಿಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ ಪಕ್ಷಕ್ಕೆ ಉಳಿಗಾಲವಿಲ್ಲ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.

ಸರ್ಕಾರ ಬೀಳುತ್ತೆ ಅನ್ನೋದನ್ನ ನಾನು ಒಪ್ಪಲ್ಲ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಆ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ, 5 ವರ್ಷಗಳ ಕಾಲ ನಡಿಯಲಿ ಬಿಡಿ. ಇನ್ನೂ ಯಾವುದೇ ಆಪರೇಷನ್ ಕಮಲ ಮಾಡುವುದಕ್ಕೆ ಹೋಗುವುದಿಲ್ಲ. ಬಹುಮತದೊಂದಿಗೆ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅದಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ಶ್ರೀರಾಮುಲು ತಿಳಿಸಿದ್ದಾರೆ.

Exit mobile version