Site icon PowerTV

ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ: ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರು:ಮಂಡ್ಯದ ಆಲೆಮನೆಯಲ್ಲಿ ಮೂರು ತಿಂಗಳಲ್ಲಿ 245 ಭ್ರೂಣ ಹತ್ಯೆ ಮಾಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅ.15ರಂದು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಕಾರು ನಿಲ್ಲಸದೇ ಹೋಗಿದ್ದಾರೆ.ಅವರನ್ನು ಹಿಂಬಾಲಿಸಿ ವಿಚಾರಣೆ ನಡೆಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಶಾಲೆ ರಜೆಗಾಗಿ ನೀರಿಗೆ ಇಲಿ ಪಾಷಾಣ ಬೆರೆಸಿದ ಸೂಡೆಂಟ್ಸ್ : ಮೂವರು ಅಸ್ವಸ್ಥ

ಹೆಣ್ಣು ಮಗು ಎಂದು ಗೊತ್ತಾದರೇ ಹತ್ಯೆ ಮಾಡುತ್ತಿರುವುದು ಗೊತ್ತಾಗಿದೆ. ಇಲ್ಲಿಯವರೆಗೂ 9 ಜನರನ್ನು ಬಂದಿಸಿದ್ದು, ಇಬ್ಬರು ಡಾಕ್ಟರ್‌ಗಳು, ಮೂವರು ಲ್ಯಾಬ್ ಟೆಕ್ನಿಷಿಯನ್ ಮತ್ತು ಮಧ್ಯವರ್ತಿಗಳು ಸಿಕ್ಕಿದ್ದಾರೆ. ಇವರೆಲ್ಲರೂ ಕೂಡಾ ಮೈಸೂರು (Mysuru) ಮತ್ತು ಮಂಡ್ಯ ಮೂಲದವರಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಶಾಲೆ ರಜೆಗಾಗಿ ನೀರಿಗೆ ಇಲಿ ಪಾಷಾಣ ಬೆರೆಸಿದ ಸೂಡೆಂಟ್ಸ್ : ಮೂವರು ಅಸ್ವಸ್ಥ

 ಘಟನೆಯ ವಿವರ: 

ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ್ದು, ಆರೋಪಿಗಳೇ ಒಪ್ಪಿಕೊಂಡಂತೆ ಎರಡು ವರ್ಷಗಳಿಂದ ಭ್ರೂಣ ಹತ್ಯೆ ಮಾಡುತ್ತಿದ್ದಾರೆ. ಒಂದು ವರ್ಷಕ್ಕೆ ಕನಿಷ್ಠ 1,000 ಭ್ರೂಣ ಹತ್ಯೆ ಮಾಡುತ್ತಾರೆ. ಎರಡು ವರ್ಷಕ್ಕೆ 2,000 ಭ್ರೂಣ ಹತ್ಯೆ ಮಾಡಿರುವ ಶಂಕೆ ಇದೆ. ಪೊಲೀಸರ ತನಿಖೆಯಲ್ಲಿ ಮೂರು ವರ್ಷದಿಂದ ಕೃತ್ಯವೆಸಗಿರುವುದು ಗೊತ್ತಾಗಿದೆ. ಅಲ್ಲಿಗೆ 3,000 ದಷ್ಟು ಭ್ರೂಣ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ತಿಳಿಸಿದರು.

 

Exit mobile version