Site icon PowerTV

ಶಾಲೆ ರಜೆಗಾಗಿ ನೀರಿಗೆ ಇಲಿ ಪಾಷಾಣ ಬೆರೆಸಿದ ಸೂಡೆಂಟ್ಸ್ : ಮೂವರು ಅಸ್ವಸ್ಥ

ಕೋಲಾರ: ಶಾಲೆಗೆ ರಜೆ ನೀಡಲಿ ಎಂದು ಕುಡಿಯುವ ನೀರಿಗೆ ಇಲಿ ಪಾಷಾಣ ಬೆರೆಸಿ ಕುಡಿದು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಂಗಾರಪೇಟೆ ತಾಲ್ಲೂಕು ಡೊಡ್ಡಪೊನ್ನಾಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಅಸ್ಥರಾಗಿದ್ದ ಮಕ್ಕಳನ್ನು ಕೋಲಾರದ  ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಪ್ರಕರಣ ಕಾಮಸಮುದ್ರ ಪೊಲೀಸ್ ಠಾಣಾಯಲದಲಿ ದಾಖಲಾಗಿದೆ.

ನೀರಿಗೆ ಇಲಿ ಪಾಷಾಣ ಹಾಕಿದ ವಿದ್ಯಾರ್ಥಿ

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಏನಾದರು ತೊಂದರೆಯಾದರೆ ರಜೆ ಕೊಡುತ್ತಾರೆ. ನಂತರ ನಾನು ಊರಿಗೆ ಹೋಗಿ ತಂದೆ-ತಾಯಿಯನ್ನು ನೋಡಬಹದು ಎಂದು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಲೆಕ್ಕಾಚಾರ ಹಾಕಿದ್ದಾನೆ. ಹೀಗಾಗಿ ಈತ ಕುಡಿಯುವ ನೀರಿಗೆ ಇಲಿ ಪಾಷಾಣ ಹಾಕಿದ್ದಾನೆ. ವಿದ್ಯಾರ್ಥಿ ಮಾನಸೀಕ ಖಿನ್ನತೆಯಿಂದ ಬಳಲುತ್ತಿದ್ದಾನೆ ಎಂಬ ವಿಷಯ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

 

ಇನ್ನು ವಿದ್ಯಾರ್ಥಿಯ ತಂದೆ ಮತ್ತು ತಾಯಿ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ನಮ್ಮ ಮಗ ಚೆನ್ನಾಗಿ ಓದಲಿ ಎಂದು ಹಾಸ್ಟೆಲ್​ಗೆ ದಾಖಲು ಮಾಡಿದ್ದರು. ಆದರೆ ಮಗ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ.

 

 

 

Exit mobile version