Site icon PowerTV

ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬಡವರು ಎನ್ನದೇ ಮಾನನವೀಯತೆಯಿಂದ ಯಾವುದೇ ತಾರತಮ್ಯವಿಲ್ಲದೇ ಉತ್ತಮ ಆರೋಗ್ಯದ ಸೇವೆಯನ್ನ ನೀಡಿ ಎಂದು ವೈದ್ಯರಿಗೆ ಹೃದಯಸ್ಪರ್ಶಿ ಕಿವಿಮಾತು ಹೇಳಿದರು.‌ 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆಂಬ್ಯುಲೆನ್ಸ್‌ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಗುಣಮಟ್ಟದ ಆರೋಗ್ಯ ಸೇವೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ (Government Hospital) ಸಿಗಬೇಕು ಎನ್ನುವುದು ಸರ್ಕಾರದ ಗುರಿ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಆಸ್ಪತ್ರೆ ಹಳೇ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನೂ ಮಾನವೀಯವಾಗಿ ನಡೆಸಿಕೊಳ್ಳಬೇಕು ಎಂದರು.

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ನೂತನ 262 ತುರ್ತು 108 ಆಂಬ್ಯುಲೆನ್ಸ್‌ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ 840ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳ ಅಗತ್ಯವಿದೆ. ಪ್ರತಿ ತಾಲೂಕಿನಲ್ಲಿ 4 ಆಂಬ್ಯುಲೆನ್ಸ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿ ದಿನ ನೂರಾರು ಮಂದಿಗೆ ತುರ್ತು ಆರೋಗ್ಯ ಸೇವೆಯನ್ನು ಒದಗಿಸುತ್ತಿವೆ. ಪ್ರಾಥಮಿಕ ತುರ್ತು ಚಿಕಿತ್ಸೆ ಪ್ರಾಣ ರಕ್ಷಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

Exit mobile version