Site icon PowerTV

ಮುಸ್ಲಿಮರು ನಮ್ಮದೇ ರಾಜ್ಯ ಎನ್ನುವ ಭ್ರಮೆಯಲ್ಲಿದ್ದಾರೆ : ಪ್ರಮೋದ್ ಮುತಾಲಿಕ್

ಬೆಂಗಳೂರು : ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ಸಾಯಲು ಮುಂದಾಗಿ ಎಂದು ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಇಡೀ ಹಿಂದೂಗಳಿಗೆ ಇವರು ಈ ರೀತಿಯ ಆಹ್ವಾನ ನೀಡಿದ್ದಾರೆ. ಕಾಂಗ್ರೆಸ್‍ನ ತುಷ್ಟೀಕರಣ ಪರಿಣಾಮ ಮುಸ್ಲಿಮರು ನಮ್ಮದೇ ರಾಜ್ಯ ಎನ್ನುವ ಭ್ರಮೆಯಲ್ಲಿದ್ದಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಈ ದೇಶವನ್ನು ಇಸ್ಲಾಂ ಮಾಡುತ್ತೇವೆ. ಖಡ್ಗದ ಆಧಾರದ ಮೇಲೆ ಮತಾಂತರ ಮಾಡುತ್ತೇವೆ ಎಂದು ಹೊರಟಿದ್ದಾರೆ. ಮುಜಾಹಿದ್ದೀನ್ ಎಂಬ ಹಿಂದೂ ವಿರೋಧಿ ಸಂಘಟನೆಯಿಂದ ಈ ರೀತಿಯ ಸಂದೇಶ ಬಂದಿದೆ. ಇದು ಬಹು ದೊಡ್ಡ ಆತಂಕದ ಸಂಗತಿಯಾಗಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರ ಕಾರಣ ಎಂದು ಅವರು ಆರೋಪಿಸಿದ್ದಾರೆ.

ಶಾಲಾ-ಕಾಲೇಜುಗಳಿಗೆ ಬೆದರಿಕೆ ಬರುತ್ತಿರುವುದು ಗಂಭೀರ ವಿಚಾರವಾಗಿದೆ. ಜನರು ತಮ್ಮ ಸುರಕ್ಷತೆ ಬಗ್ಗೆ ವಿಚಾರ ಮಾಡಬೇಕು. ಈ ಮೇಲ್‍ಗಳು ಎಲ್ಲಿಂದ ಯಾರಿಗೆ ಬಂದಿದೆ ಎಂಬುದನ್ನು ಪತ್ತೆ ಮಾಡಬೇಕು. ಇದೊಂದು ಭಯೋತ್ಪಾದನೆಗೆ ಸಂಬಂಧಪಟ್ಟ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಘಟನೆಗಳು ಆಗುವ ಬಗ್ಗೆ ಮೇಲ್‍ನಲ್ಲಿ ಸೂಚನೆ ಇದೆ. ಸರ್ಕಾರ ಇಂತವರನ್ನು ಹದ್ದುಬಸ್ತಿನಲ್ಲಿ ಇಡಬೇಕು. ಇವರನ್ನು ಒದ್ದು ಒಳಗೆ ಹಾಕಬೇಕು ಎಂದು ಗುಡುಗಿದ್ದಾರೆ.

Exit mobile version