Site icon PowerTV

ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ : ಮಂಡ್ಯದಲ್ಲಿ ಆಯುಷ್ ವೈದ್ಯ ಸತೀಶ್ ನಿಗೂಢ ಸಾವು

ಬೆಂಗಳೂರು : ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಡಾ. ಸತೀಶ್ ಕಾರಿನಲ್ಲಿ ಹೆಣವಾಗಿ ಪತ್ತೆಯಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಕಾರಿನಲ್ಲಿ ಮೃತ ದೇಹ ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ವೈದ್ಯ ಸತೀಶ್ ಎಂದು ಗುರುತಿಸಲಾಗಿದೆ.

ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ಈ ಘಟನೆ ನಡೆದಿದೆ. ಇನ್ನು ಕೂಡ ಸಾವಿಗೆ ಕಾರಣ ತಿಳಿದುಬಂದಿಲ್ಲ. ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಬಾಂಬ್​ ಬೆದರಿಕೆ: ಸಮಗ್ರ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ 

ಕೊಣಸೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯರಾಗಿ ಕೆಲಸಮಾಡುತ್ತಿದ್ದರು. ಹಲವು ವರ್ಷಗಳಿಂದ ಶಿವಳ್ಳಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದ ಡಾ.ಸತೀಶ್, ಆಲೆಮನೆಗೆ ಆರೋಗ್ಯ ಸಚಿವರು ಭೇಟಿ ನೀಡಿದ್ದಾಗ ಸ್ಥಳೀಯರು ಸತೀಶ್ ಬಗ್ಗೆ ಮಾಹಿತಿ ನೀಡಿದ್ದರು. ಡಾ.ಸತೀಶ್ ವಿಚಾರಣೆ ಮಾಡುವಂತೆ ಆರೋಗ್ಯ ಸಚಿವ ಹೇಳಿದ್ದರು.

Exit mobile version